Home Mangalorean News Kannada News ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ

Spread the love

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ರಾಜಭವನದಲ್ಲಿ ನಡೆದ  ಸಮಾರಂಭದಲ್ಲಿ ಬುಧವಾರ  ಪ್ರಮಾಣ ವಚನ ಸ್ವೀಕರಿಸಿದರು.

ರಾಜ್ಯಪಾಲರ ಲೋಕ ಭವನದ ಗಾಜಿನ ಮನೆಯಲ್ಲಿ ಜರುಗಿದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ಡಿ ಕೆ ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್, ಇತರ ಸಚಿವರಾಗಿ ಕೆ.ಎಚ್. ಮುನಿಯಪ್ಪ , ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಯತೀಂದ್ರ ಸಿದ್ದರಾಮಯ್ಯ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಪ್ರಮಾಣ ವಚನ ಸ್ವೀಕರಿಸಿದರು.


Spread the love

Exit mobile version