ಕೊಂಕಣ ರೈಲ್ವೆಯ ಎಲ್ಲಾ ಹಳಿಗಳನ್ನು ಡಬ್ಬಿಂಗ್ ಮಾಡುವುದು ನನ್ನ ಮಿಷನ್ : ಸಚಿವ ಅಶ್ವಿನಿ ವೈಷ್ಣವ್

Spread the love

ಕೊಂಕಣ ರೈಲ್ವೆಯ ಎಲ್ಲಾ ಹಳಿಗಳನ್ನು ಡಬ್ಬಿಂಗ್ ಮಾಡುವುದು ನನ್ನ ಮಿಷನ್ : ಸಚಿವ ಅಶ್ವಿನಿ ವೈಷ್ಣವ್

ಉಡುಪಿ: ಕೊಂಕಣ ರೈಲ್ವೆಯ ಎಲ್ಲಾ ಹಳಿಗಳನ್ನು ಡಬ್ಬಿಂಗ್ ಮಾಡುವುದು ನನ್ನ ಮಿಷನ್ ಆಗಿದ್ದು, ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುವುದು. ಕೊಂಕಣ ಪ್ರದೇಶ ಹಾಗೂ ಕರಾವಳಿ ಕರ್ನಾಟಕದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಆದ್ಯತೆ ನೀಡಿದ್ದು, ಈ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರಕಾರದಿಂದ ಅನುಮೋದನೆ ದೊರೆಯುತ್ತಿದೆ ಎಂದು ಕೇಂದ್ರ ರೈಲ್ವೇ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದರು.

ಶುಕ್ರವಾರ ಉಡುಪಿ ಅಜ್ಜರಕಾಡು ಆಕಾಶವಾಣಿ ಕೇಂದ್ರದಲ್ಲಿ 101.9 ಮೆಗಾಹರ್ಟ್ಸ್, 1 ಕಿಲೋವ್ಯಾಟ್ ಸಾಮರ್ಥ್ಯದ ಎಫ್ಎಂ ಪ್ರೇಷಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊಂಕಣ ರೈಲ್ವೇಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಈಗಾಗಲೇ 10 ರೈಲ್ವೇ ಮೇಲ್ವೇತುವೆಗಳು ಹಾಗೂ ಎರಡು ಸ್ತುರಂಗಗಳ ನಿರ್ಮಾಣ ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಈ ಭಾಗದ ರೈಲ್ವೇ ಸಂಪರ್ಕವನ್ನು ಮತ್ತಷ್ಟು ಸುಧಾರಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದರು.

ಉಡುಪಿ ಇಂದ್ರಾಳಿ ರೈಲು ನಿಲ್ದಾಣ ಜಿಲ್ಲೆಯ ಪ್ರಮುಖ ನಿಲ್ದಾಣವಾಗಿದ್ದು ಅದನ್ನು ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹೊಸ ಪ್ಲಾಟ್ಫಾರ್ಮ್ ನಿರ್ಮಿಸುವುದರಿಂದ ಹೆಚ್ಚಿನ ಪ್ರಯಾಣಿಕರಿಗೆ ಅನುಕೂಲವಾಗಲಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳ ತಂಡಕ್ಕೆ ಸೂಚಿಸಲಾಗಿದೆ. ಪ್ರಯಾಣಿಕರಿಗೆ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವುದರ ಜತೆಗೆ ರೈಲು ಸೇವೆಗಳ ಬಳಕೆಯನ್ನೂ ಹೆಚ್ಚಿಸಬೇಕಿದೆ. ಸ್ಥಳೀಯ ವಾಸ್ತುಶೈಲಿಗೆ ಆದ್ಯತೆ ನೀಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಉಡುಪಿ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದೆ. ಈ ಎರಡು ಪ್ರಮುಖ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಅಗತ್ಯಗಳಿಗೆ ಅಮಗುಣವಾಗಿ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿ, ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುವುದು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಬೈಂದೂರು ರೈಲು ನಿಲ್ದಾಣವನ್ನೂ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಪ್ರಸ್ತಾವನೆಗೆ ಕರ್ನಾಟಕ, ಕೇರಳ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಅನುಮತಿ ಅಗತ್ಯವಿದೆ

ಉಡುಪಿ ರೈಲು ನಿಲ್ದಾಣವು ಕರಾವಳಿ ಭಾಗದ ಪ್ರಮುಖ ರೈಲ್ವೆ ನಿಲ್ದಾಣವಾಗಿದ್ದು, ಅದನ್ನು ಮೇಲ್ದರ್ಜೆಗೇರಿಸಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುವುದು. ಸ್ಥಳೀಯ ಪಾರಂಪರಿಕ ಶೈಲಿಯನ್ನು ಅಳವಡಿಸಿಕೊಂಡು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿಯೂ ಪ್ರಯತ್ನಿಸಲಾಗುವುದು ಎಂದರು.

ಉಡುಪಿ ಪ್ರಮುಖ ಧಾರ್ಮಿಕ ಹಾಗೂ ಶೈಕ್ಷಣಿಕ ಕೇಂದ್ರವಾಗಿರುವುದರಿಂದ ಇಲ್ಲಿನ ರೈಲು ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಮಹತ್ವವಿದೆ. ಪ್ರಯಾಣಿಕರಿಗೆ ಉತ್ತಮ ಸೌಲಭ್ಯ ಕಲ್ಪಿಸುವುದರ ಜತೆಗೆ ಸ್ಥಳೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರತಿಬಿಂಬಿಸುವ ರೀತಿಯಲ್ಲಿ ನಿಲ್ದಾಣವನ್ನು ರೂಪಿಸುವ ಉದ್ದೇಶವಿದೆ. ಇದೇ ವೇಳೆ, ಉಡುಪಿ ಜಿಲ್ಲೆಯ ಬೈಂದೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಬಗ್ಗೆಯೂ ಚಿಂತನೆ ನಡೆಸಲಾಗುತ್ತಿದೆ.

ಬೆಂಗಳೂರು–ಮಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ರೈಲು ಸೇವೆಯು ಕರಾವಳಿ ಭಾಗದ ಜನರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಕಲ್ಪಿಸಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಪ್ರಸ್ತುತ ರೈಲು ಸೇವೆಯನ್ನು ಮಡಗಾಂವ್ನಿಂದ ಆರಂಭಿಸಿ, ಕರಾವಳಿ ಪ್ರದೇಶಗಳ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಯೋಜನೆಯೂ ಇದೆ. ಇದರಿಂದ ಈ ಭಾಗದ ಜನರಿಗೆ ಉತ್ತಮ ಸಾರಿಗೆ ಸ್ತಂಪರ್ಕ ದೊರೆಯಲಿದೆ ಎಂದರು.

ಕೊಂಕಣ ರೈಲ್ವೇಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆಗೆ ಕರ್ನಾಟಕ ಮತ್ತು ಕೇರಳ ಸರಕಾರಗಳ ಅನುಮತಿ ಇನ್ನೂ ದೊರೆಯಬೇಕಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಮುಂದುವರಿಸಲಾಗಿದೆ ಎಂದು ಹೇಳಿದರು.

ಯೂಟ್ಯೂಬ್ ಹಾಗೂ ಇತರ ವೆಬ್ ಚಾನೆಲ್ಗಳ ನಿಯಂತ್ರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯೂಟ್ಯೂಬ್ ಚಾನೆಲ್ಗಳು ತಾವು ಪ್ರಕಟಿಸುವ ಕಂಟೆಂಟ್ಗಳಿಗೆ ತಾವೇ ಜವಾಬ್ದಾರರಾಗಿರಬೇಕು ಎಂದು ಮಾಧ್ಯಮಗಳಿಗೆ ತಿಳಿಸಿದರು.


Spread the love
Subscribe
Notify of

0 Comments