ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಡಾ ಬರಗೂರು ರಾಮಚಂದ್ರಪ್ಪ ಒತ್ತಾಯ

Spread the love

ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಲು ಡಾ ಬರಗೂರು ರಾಮಚಂದ್ರಪ್ಪ ಒತ್ತಾಯ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುವೆಂಪು ಪ್ರತಿಷ್ಠಾನ, ಮಂಜೇಶ್ಕರ , ತುಳು ಭವನ, ಬದಿಯಡ್ಕ, ಕಾಸರಗೋಡು ಇಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಟ್ರಸ್ಟ್, ಮಂಜೇಶ್ವರದ ಸಂಯುಕ್ತ ಆಶ್ರಯದಲ್ಲಿ ತುಳುರತ್ನ ಬಹುಭಾಷಾ ವಿದ್ವಾಂಸ ಡಾಕ್ಟರ್ ಪಿ. ವೆಂಕಟರಾಜ ಪುಣಿoಚಿತ್ತಾಯರ ಜನ್ಮ ದಿನಾಚರಣೆಯ ಅಂಗವಾಗಿ ಪುವೆಂಪು ನೆನಪು 2026 ಎಂಬ ಕಾರ್ಯಕ್ರಮವನ್ನು ಪಾರ್ತಿಸುಬ್ಬ ವೇದಿಕೆ, ಗಿಳಿವಿಂಡು ಮಂಜೇಶ್ವರದಲ್ಲಿ ಶನಿವಾರ ಆಯೋಜಿಸಲಾಗಿತ್ತು.

ಶಾಸಕ ಎ.ಕೆ.ಎಂ. ಆಶ್ರಫ್, ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸಭಾಪತಿ ಸಲೀಮ್ ಅಹಮದ್ ನೆರವೇರಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಮತ್ತು ಗಿಳಿವಿಂಡು ಪ್ರತಿಷ್ಠಾನದ ಅಧ್ಯಕ್ಷ ಡಾ ವೀರಪ್ಪ ಮೊಯ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡರು.

 ಕಾರ್ಯಕ್ರಮದಲ್ಲಿ ಶ್ರೀ ಸೋಮಣ್ಣ ಬೇವಿನಮರದ, ಅಧ್ಯಕ್ಷರು, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಪ್ರಕಾಶ್ ಮತ್ತಿಹಳ್ಳಿ, ಕಾರ್ಯದರ್ಶಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಶ್ರೀ ರಮಾನಂದ ಬನಾರಿ, ಹಿರಿಯ ಸಾಹಿತಿಗಳು, ಶ್ರೀ ಅಶೋಕ್ ಚಂದರಗಿ, ಗಡಿ ಪ್ರಾಧಿಕಾರ ಸದಸ್ಯರು, ಶ್ರೀ ಎನ್. ಚನಿಯಪ್ಪ ನಾಯ್ಕ, ಅಧ್ಯಕರು, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮ, ಕಾಸರಗೋಡು , ರಾಜ್ಯ ಕಾರ್ಮಿಕ ಇಲಾಖೆ ಕನಿಷ್ಠ ವೇತನ ಆಯೋಗದ ಅಧ್ಯಕ್ಷ ಟಿ ಎಂ ಶಾಹೀದ್ , ಶ್ರೀ ರವಿ ನಾಯ್ಕಾಪು, ರವೀಶ ತಂತ್ರಿ ರವಿನಾರಾಯಣ ಭಟ್ ಹಾಗೂ ಇನ್ನೂ ಮುಂತಾದ ಕನ್ನಡ ಪರ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು, ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಗೀತೆಗಳನ್ನು ಆಯೋಜಿಸಲಾಗಿತ್ತು . ನಾಡೋಜ ಡಾ. ಬರಗೂರು ರಾಮಚಂದ್ರಪ್ಪ, ಹಿರಿಯ ಸಾಹಿತಿಗಳು ಇವರಿಗೆ ಪುವೆಂಪು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಸಾಂಸ್ಕೃತಿಕ ಯೋಜನೆಗಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಡಾ ಬರಗೂರು ರಾಮಚಂದ್ರಪ್ಪ ಒತ್ತಾಯಿಸಿದರು.

ಪ್ರಶಸ್ತಿ ಪುರಸ್ಕೃತರುರಾದ ಹಲವಾರು ಮಹನೀಯರಿಗೆ ಬಹುಮಾನ ವಿತರಣೆಯನ್ನು ಮಾಡಲಾಯಿತು ಹಾಗೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.a


Spread the love
Subscribe
Notify of

0 Comments