ಉಡುಪಿ ಪತ್ರಿಕಾಭವನದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಉದ್ಘಾಟನೆ
ಉಡುಪಿ: ಉಡುಪಿ ಜನರಲ್ ಕ್ಯಾಪ್ಟರ್ ಪ್ರೈವೆಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಉಡುಪಿ ಪತ್ರಿಕಾ ಭವನದಲ್ಲಿ ಸ್ಥಾಪಿಸಲಾಗಿರುವ ಕುಡಿಯುವ ನೀರಿನ ವ್ಯವಸ್ಥೆಯನ್ನು ಸೋಮವಾರ ಜನರಲ್ ಕ್ಯಾಪ್ಟರ್ನ ಮಾಲಕ ಗಣೇಶ್ ರಾವ್ ಉದ್ಘಾಟಿಸಿದರು.

ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಒದಗಿಸಿದ ಗಣೇಶ್ ರಾವ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ದಲ್ಲಿ ವಾರ್ತಾಧಿಕಾರಿ ಮಂಜುನಾಥ್, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಸಮಿತಿಯ ನಿಕಟಪೂರ್ವ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.
ಪತ್ರಿಕಾ ಭವನ ಸಮಿತಿ ಸಹಸಂಚಾಲಕ ಗಣೇಶ್ ಕಲ್ಯಾಣಪುರ ವಂದಿಸಿದರು. ಸದಸ್ಯ ಮೈಕಲ್ ರೋಡಿಗ್ರಸ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.