Spread the love
ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಗುರುತಿಸಿರುವ ಸ್ಥಳಗಳಲ್ಲಿ ಡ್ರೋನ್ ಸರ್ವೆ
ಮಂಗಳೂರು: ನಗರದಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ಉದ್ದೇಶದಿಂದ ಈಗಾಗಲೇ ಗುರುತಿಸಲಾಗಿರುವ ಸ್ಥಳಗಳಲ್ಲಿ ಡ್ರೋನ್ ಮೂಲಕ ಸರ್ವೆ ಕಾರ್ಯ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಮುಡಾ ಆರ್ಐ ಜೋಯ್ ಉಪಸ್ಥಿತರಿದ್ದರು.
ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸುವ ನಿಟ್ಟಿನಲ್ಲಿ ಈ ಸರ್ವೆ ಕಾರ್ಯ ಮಹತ್ವದ ಹೆಜ್ಜೆಯಾಗಿದೆ.
Spread the love













