ಭಾರೀ ಮಳೆ ಹಿನ್ನಲೆ: ನಾಳೆ (ಜು. 25) ಉಡುಪಿ ಜಿಲ್ಲೆಯ ಶಾಲೆ, ಪಿಯು, ಐಟಿಐ, ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು, ಡಿಪ್ಲೋಮ, ಐಟಿಐ ಕಾಲೇಜುಗಳಿಗೆ ಜು. 25ರ ಶನಿವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಅರೆಂಜ್ ಆಲ್ಬರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲಾ, ಪದವಿ ಪೂರ್ವ, ಡಿಪ್ಲೊಮಾ, ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.
ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಮರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದೆ.
1. ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
2. ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂಧರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.
3. ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
4. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.
5. ಈಗ ಮಳೆಗಾಗಿ, ಮುಂಜಾಗೃತ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
6. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಕರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
7. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
8. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.
ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24*7 ಕಂಟ್ರೋಲ್ ರೂಂ – 1077/
0820-2574802-DC office
0820-2520417-Udupi taluk
08258-230201-Karkala taluk
08254-230357-Kundapura
0820-2560494-Brahmavara
08254-251657-Byndoor
0820-2551444-Kaup.
08253-250201-Hebri
0820-2520306-ಉಡುಪಿ ನಗರಸಭೆ
