ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ಪಾಲ್ ಸುವರ್ಣ

Spread the love

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣವೇ ಅಡಿಪಾಯ : ಯಶ್ಪಾಲ್ ಸುವರ್ಣ

ಉಡುಪಿ: ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ವಿದ್ಯಾವಂತ ಯುವ ಜನತೆಯ ಕೊಡುಗೆ ಅಪಾರವಾಗಿದ್ದು, ಸಧೃಡ ಭಾರತ ನಿರ್ಮಾಣಕ್ಕೆ ಗುಣಮಟ್ಟದ ಶಿಕ್ಷಣವೇ ಅಡಿಪಾಯ ವಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮಕ್ಕೆ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ ಯಲ್ಲಿ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲೆಯ ಶೈಕ್ಷಣಿಕ ಸಾಧನೆಯಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಹಾಗೂ ಖಾಸಗಿ ದಾನಿಗಳ ಕೊಡುಗೆ ಅಪಾರವಾಗಿದ್ದು, ಮುಂದಿನ ದಿನಗಳಲ್ಲಿಯೂ ಉಡುಪಿ ಜಿಲ್ಲೆ ಎಸ್ ಶೈಕ್ಷಣಿಕವಾಗಿ ಅಗ್ರ ಸ್ಥಾನವನ್ನು ಅಲಂಕರಿಸಲಿ ಎಂದು ಶಾಸಕ ಯಶ್ ಪಾಲ್ ಸುವರ್ಣ ಶುಭ ಹಾರೈಸಿದರು.

ಶಾಲಾ ಪ್ರಾರಂಭೋತ್ಸವದ ಅಂಗವಾಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡೆಕಾರು, ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆ, ಗಾಂಧಿ ಶತಾಬ್ಧಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಪೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಿ, ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಪೋಷಕರು, ಸ್ಥಳೀಯ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.


Spread the love
Subscribe
Notify of

0 Comments