ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ವೇಳೆ ಪರೀಕ್ಷೆ: ಎಬಿವಿಪಿ ಹೋರಾಟಕ್ಕೆ ವಿಎಚ್‌ಪಿ ಬೆಂಬಲ

Spread the love

ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯ ವೇಳೆ ಪರೀಕ್ಷೆ: ಎಬಿವಿಪಿ ಹೋರಾಟಕ್ಕೆ ವಿಎಚ್‌ಪಿ ಬೆಂಬಲ

ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಪರೀಕ್ಷೆಗಳನ್ನು ನಡೆಸುತ್ತಿರುವುದನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ತೀವ್ರವಾಗಿ ಖಂಡಿಸಿದೆ. ಹಬ್ಬದ ರಜೆಯ ಸಂದರ್ಭದಲ್ಲಿ ಪರೀಕ್ಷೆಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡಲಾಗುತ್ತಿದೆ ಎಂದು ಆರೋಪಿಸಿರುವ ವಿಎಚ್‌ಪಿ, ಈ ಕ್ರಮದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನಡೆಸುತ್ತಿರುವ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್, ದಸರಾ ಹಬ್ಬದ ಸಂದರ್ಭದಲ್ಲಿ ಪರೀಕ್ಷೆಗಳನ್ನು ಆಯೋಜಿಸಿರುವ ಕಾಲೇಜು ಆಡಳಿತ ಮಂಡಳಿಯ ಧೋರಣೆ ಖಂಡನೀಯವಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಗೌರವಿಸುವ ನಿಟ್ಟಿನಲ್ಲಿ ಕಾಲೇಜು ಆಡಳಿತ ಮಂಡಳಿ ಕೂಡಲೇ ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಪರೀಕ್ಷೆಗಳನ್ನು ಮುಂದೂಡುವಂತೆ ಒತ್ತಾಯಿಸಿ ಎಬಿವಿಪಿ ನಡೆಸುತ್ತಿರುವ ಹೋರಾಟಕ್ಕೆ ವಿಶ್ವ ಹಿಂದೂ ಪರಿಷತ್ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಶರಣ್ ಪಂಪ್ವೆಲ್ ತಿಳಿಸಿದ್ದಾರೆ.


Spread the love
Subscribe
Notify of

0 Comments