ಎಂ.ಆರ್.ಪಿ.ಎಲ್ ಘಟಕದಲ್ಲಿ ಸ್ಫೋಟ: 9 ಮಂದಿ ಗಾಯ; ಉನ್ನತ ಮಟ್ಟದ ತನಿಖೆಗೆ ಸಚಿವ ಖಾದರ್ ಆಗ್ರಹ

Spread the love

ಎಂ.ಆರ್.ಪಿ.ಎಲ್ ಘಟಕದಲ್ಲಿ ಸ್ಫೋಟ: 9 ಮಂದಿ ಗಾಯ; ಉನ್ನತ ಮಟ್ಟದ ತನಿಖೆಗೆ ಸಚಿವ ಖಾದರ್ ಆಗ್ರಹ

ಮಂಗಳೂರು: ನಗರದ ಎಂ.ಆರ್.ಪಿ.ಎಲ್ (MRPL) ಸಂಸ್ಥೆಯ ಕೋಕರ್ ಹೈಡ್ರೋಟ್ರೀಟರ್ ಘಟಕದಲ್ಲಿ ಬುಧವಾರ ಮಧ್ಯಾಹ್ನ ಆಕಸ್ಮಿಕ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಆಗ್ರಹಿಸಿದ್ದಾರೆ.

ಘಟನೆ ತಿಳಿದ ತಕ್ಷಣ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಳ್ಳಲಾಗಿದೆ. ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ, ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಒದಗಿಸುವಂತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಲಾಗಿದೆ.

ಸದ್ಯ ಲಭ್ಯವಿರುವ ಮಾಹಿತಿಯಂತೆ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ.

ಘಟನೆಯ ಕುರಿತು ತನಿಖೆ ನಡೆಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆತಂಕಕ್ಕೊಳಗಾಗಬಾರದು. ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ಘಟನೆಯ ಕುರಿತು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಿಂದ ಉನ್ನತ ಮಟ್ಟದ ತನಿಖೆ ನಡೆಸಬೇಕು. ಅಲ್ಲದೆ, ಘಟನೆಯ ಹೊಣೆ ಹೊತ್ತು ಎಂಆರ್ಪಿಎಲ್ ಸಂಸ್ಥೆಯು ಗಾಯಾಳುಗಳಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ.


Spread the love
Subscribe
Notify of

0 Comments