ಪಣಂಬೂರು ಎಂಸಿಎಫ್ ಬಳಿ ಎಕ್ಸ್ಪ್ರೆಸ್ ಬಸ್ ಪಲ್ಟಿ: ಹಲವರಿಗೆ ಸಣ್ಣಪುಟ್ಟ ಗಾಯ
ಮಂಗಳೂರು: ನಗರದ ಪಣಂಬೂರು ಎಂಸಿಎಫ್ ಬಳಿ ಕಾರ್ಕಳ–ಮೂಲ್ಕಿ–ಮಂಗಳೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಎಕ್ಸ್ಪ್ರೆಸ್ ಬಸ್ವೊಂದು ರಸ್ತೆ ಮೇಲೆ ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದಲ್ಲಿ ಬಸ್ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಬಸ್ ಪಲ್ಟಿಯಾದ ಪರಿಣಾಮ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಅಪಘಾತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
