SIR ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಆರೋಪ; ತಂದೆ-ಮಗ ಬಂಧನ

Spread the love

SIR ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಆರೋಪ; ತಂದೆ-ಮಗ ಬಂಧನ

ಕುಂದಾಪುರ: ಎಸ್ಐಆರ್ (Special Intensive Revision) ಫಾರ್ಮ್ ಸಲ್ಲಿಕೆ ವೇಳೆ ಗ್ರಾಮ ಆಡಳಿತಾಧಿಕಾರಿಗೆ ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕುಂದಾಪುರ ಗ್ರಾಮಾಂತರ ಪೊಲೀಸರು ತಂದೆ-ಮಗನನ್ನು ಬಂಧಿಸಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಜುಲೈ 15ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಗುಲ್ವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಆಡಳಿತಾಧಿಕಾರಿ ಪ್ರಕಾಶ್ ನಾಯ್ಕ್ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಗುಲ್ವಾಡಿ ನಿವಾಸಿಗಳಾದ ಪಳ್ಳಿ ಸುಲೇಮಾನ್ ಹಾಗೂ ಅವರ ಪುತ್ರ ಶಫಿ ಎಸ್ಐಆರ್ ಫಾರ್ಮ್ ಸಲ್ಲಿಸಲು ಕಚೇರಿಗೆ ಬಂದಿದ್ದರು.

ಈ ವೇಳೆ ಫಾರ್ಮ್ ಅನ್ನು ತಮ್ಮ ಬಳಿ ನೀಡುವಂತೆ ಗ್ರಾಮ ಆಡಳಿತಾಧಿಕಾರಿ ತಿಳಿಸಿದಾಗ, ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದಲ್ಲದೆ, ಜಾತಿ ನಿಂದನೆ ಮಾಡಿ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ ಹಾಗೂ ವೃತ್ತ ನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ ಅವರ ನೇತೃತ್ವದಲ್ಲಿ, ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ನಿರಂಜನ್ ಗೌಡ ಮತ್ತು ಚಂದ್ರಕಲಾ ಎಂ. ಪತ್ತಾರ್ ನೇತೃತ್ವದ ತಂಡ ಜುಲೈ 16ರಂದು ಗುಲ್ವಾಡಿ ಗ್ರಾಮದ ಮಾವಿನಕಟ್ಟೆ ಪ್ರದೇಶದಲ್ಲಿ ಆರೋಪಿಗಳಾದ ಪಳ್ಳಿ ಸುಲೇಮಾನ್ ಹಾಗೂ ಶಫಿ ಅವರನ್ನು ಬಂಧಿಸಿದೆ.

ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಮುಂದುವರಿಸಿದ್ದಾರೆ.


Spread the love
Subscribe
Notify of

0 Comments