Home Mangalorean News Kannada News ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರ ರಕ್ಷಣೆ

ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರ ರಕ್ಷಣೆ

Spread the love

ಮಂಗಳೂರಿನ ಅಳಿವೆ ಬಾಗಿಲಿನಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ: 6 ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್‌ವೊಂದು ಅಳಿವೆಬಾಗಿಲಿನಲ್ಲಿ ಮುಳುಗಿದ ಘಟನೆ ನಡೆದಿದೆ.

ಇಬ್ರಾಹಿಂ ಖಲೀಲ್ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಮೀನುಗಾರಿಕಾ ಬೋಟ್ ಆಳ ಸಮುದ್ರ ಮೀನುಗಾರಿಕೆಗೆ ತೆರಳಿತ್ತು. ಮೀನುಗಾರಿಕೆ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಅಳಿವೆಬಾಗಿಲಿನಲ್ಲಿ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಜಖಂಗೊಂಡಿದೆ.

ಇದರಿಂದ ಬೋಟ್‌ನೊಳಗೆ ನೀರು ನುಗ್ಗಿದ್ದು, ಕೆಲವೇ ಕ್ಷಣಗಳಲ್ಲಿ ಬೋಟ್ ಮುಳುಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು.

ತಕ್ಷಣ ಕಾರ್ಯಪ್ರವೃತ್ತರಾದ ಇತರ ಬೋಟ್‌ಗಳಲ್ಲಿದ್ದ ಮೀನುಗಾರರು ಅಪಾಯದಲ್ಲಿದ್ದ ಆರು ಮಂದಿಯನ್ನು ರಕ್ಷಿಸಿದ್ದಾರೆ. ಬಳಿಕ ಮೀನುಗಾರಿಕಾ ಬೋಟ್ ಅಳಿವೆಬಾಗಿಲಿನಲ್ಲಿ ಮುಳುಗಿದೆ.

ಘಟನೆಯಿಂದ ಬೋಟ್ ಮಾಲೀಕರಿಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ತಿಳಿದುಬಂದಿದೆ.


Spread the love

Exit mobile version