ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ನಿಧನ

Spread the love

ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ನಿಧನ

ಉಡುಪಿ: ಆಕಾಶವಾಣಿ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ(64) ಮಂಗಳವಾರ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಡುಪಿಯ ಪ್ರಸಿದ್ಧ ಜಾನಪದ ಕಲಾವಿದ, ಗಾಯಕ ಮತ್ತು ಕನ್ನಡ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷರಾಗಿದ್ದ ಇವರು, ಅನಾರೋಗಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಸುಮಾರು ಮೂರು ದಶಕಗಳಿಗೂ ಹೆಚ್ಚು ಕಾಲ ಜಾನಪದ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಗಣೇಶ್ ಗಂಗೊಳ್ಳಿ ,ಕರ್ನಾಟಕ ಜಾನಪದ ಅಕಾಡಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ. ದೂರದರ್ಶನ ಚಂದನದ ’ಗಾನಗರಡಿ’ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments