Home Mangalorean News Kannada News ಮಾಜಿ ಶಾಸಕ, ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ

ಮಾಜಿ ಶಾಸಕ, ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ

Spread the love

ಮಾಜಿ ಶಾಸಕ, ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ನಿಧನ

ಕುಂದಾಪುರ: ಮಾಜಿ ಶಾಸಕ, ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳು ಬಿ ಅಪ್ಪಣ್ಣ ಹೆಗ್ಡೆ ಅವರು ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ 91 ವರ್ಷ ವಯಸ್ಸಾಗಿತ್ತು.

ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿದ್ದ ಅಪ್ಪಣ್ಣ ಹೆಗ್ಡೆಯವರು 1960 – 83 ರ ವರೆಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದರು. ಅಲ್ಲದೆ ತಾಲೂಕು ಅಭಿವೃದ್ಧಿ ಬೋರ್ಡಿನ ಸದಸ್ಯರಾಗಿದ್ದ ಅವರು 1983 -1994 ರವರೆಗೆ ಜನತಾ ದಳದಿಂದ ಶಾಸಕರಾಗಿ ಕೂಡ ಸೇವೆ ಸಲ್ಲಿಸಿದ್ದರು.

ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧೀ ಬ್ಯಾಂಕ್ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬಸ್ರೂರು ಶ್ರೀ ಮಹಾಲಿಂಗೇಶ್ವಾರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.

ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.


Spread the love

Exit mobile version