ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಮುಡಾ ಅಧ್ಯಕ್ಷರು, ಅಧಿಕಾರಿಗಳಿಗೆ ಅಭಿನಂದನೆ

Spread the love

ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ: ಮುಡಾ ಅಧ್ಯಕ್ಷರು, ಅಧಿಕಾರಿಗಳಿಗೆ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಮಂಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವತಿಯಿಂದ ಕೈಗೆತ್ತಿಕೊಳ್ಳಲಾಗಿರುವ ಮೂರು ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿದ ಹಿನ್ನೆಲೆಯಲ್ಲಿ ಕ್ಷೇತ್ರದ ಮುಖಂಡರು ಮುಡಾ ಅಧ್ಯಕ್ಷರು ಹಾಗೂ ಅಧಿಕಾರಿಗಳನ್ನು ಅಭಿನಂದಿಸಿದರು.

ಕುಂಪಲ ಮೂರುಕಟ್ಟೆ ಕೆರೆ, ಅಂಬ್ಲಮೊಗರು ವಾಡಕೆರೆ ಹಾಗೂ ಹರೇಕಳ ರಾಜಗುಡ್ಡೆ ತಾಮರೆ ಕೆರೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಕ್ಷೇತ್ರದ ಮುಖಂಡ ದಿನೇಶ್ ಕುಂಪಲ ಸೇರಿದಂತೆ ಹಲವು ನಾಯಕರು ಮುಡಾ ಕಚೇರಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಹಾಗೂ ಪ್ರಾಧಿಕಾರದ ಅಧಿಕಾರಿಗಳನ್ನು ಅಭಿನಂದಿಸಿದ ನಾಯಕರು, ಕೆರೆಗಳ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.


Spread the love
Subscribe
Notify of

0 Comments