ಸೇನೆ, ಯೂನಿಫಾರ್ಮ್ ಸೇವೆಗಳ ಉಚಿತ ತರಬೇತಿ: ಅರ್ಜಿ ಆಹ್ವಾನ 

Spread the love

ಸೇನೆ, ಯೂನಿಫಾರ್ಮ್ ಸೇವೆಗಳ ಉಚಿತ ತರಬೇತಿ: ಅರ್ಜಿ ಆಹ್ವಾನ 

ಮಂಗಳೂರು:  ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಎರಡನೇ ತಂಡದ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತ ಊಟ ಮತ್ತು ವಸತಿಯೊಂದಿಗೆ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು (ಬಾಲಕರಿಗೆ ಮಾತ್ರ) ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:
1.ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ(ಪ್ರವರ್ಗ-1)ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1 ಲಕ್ಷಗಳು ಆಗಿರಬೇಕು.

ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತೀ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45ರಷ್ಟು ಅಂಕಗಳÀನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು (10ನೇ ತರಗತಿಯ ಅಂಕ ಪಟ್ಟಿಯಲ್ಲಿರುವಂತೆ) 2026 ರ ಡಿಸೆಂಬರ್ 3 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ವಯಸ್ಸನ್ನು ಪರಿಗಣಿಸಲಾಗುತ್ತದೆ. ಅಭ್ಯರ್ಥಿಯು 2006 ರ ಡಿಸೆಂಬರ್ 3 ರಿಂದ 2009 ರ ಡಿಸೆಂಬರ್ 3 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ.

ಹೆಚ್ಚಿನ ಮಾಹಿತಿ ಅಥವಾ ಅರ್ಜಿ ನಮೂನೆಯನ್ನು ಆಯಾ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿಯಿಂದ ಪಡೆದು ಭರ್ತಿ ಮಾಡಿ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ-575004 (ಸಹಾಯವಾಣಿ 0824-2225078) ಇಲ್ಲಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments