Home Mangalorean News Kannada News ನ.27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ  ಸಮಗ್ರ ಅಣಕು ಕಾರ್ಯಾಚರಣೆ 

ನ.27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ  ಸಮಗ್ರ ಅಣಕು ಕಾರ್ಯಾಚರಣೆ 

Spread the love

ನ.27ರಂದು ಮಂಗಳೂರು ವಿಮಾನನಿಲ್ದಾಣದಲ್ಲಿ  ಸಮಗ್ರ ಅಣಕು ಕಾರ್ಯಾಚರಣೆ 

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು  ನವೆಂಬರ್ 27 ರಂದು ತನ್ನ ಮೊದಲ ಸಮಗ್ರ ಅಣಕು ಕಾರ್ಯಾಚರಣೆ  ನಡೆಸಲಿದೆ. ಈ ಬಾರಿ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಸಂಭವಿಸುವ ವಿಮಾನ ಅಪಘಾತದ ಸನ್ನಿವೇಶವನ್ನು ಆಧರಿಸಿ ಅಣಕು ಕಾರ್ಯಾಚರಣೆ ನಡೆಯಲಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಓಆಒಂ) ಮಾರ್ಗದರ್ಶನದಲ್ಲಿ ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಈ ಅಣಕು ಕಾರ್ಯಾಚರಣೆ ನಡೆಯಲಿದ್ದು, ವಿಮಾನ ದುರಂತ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಏರೋಡೋಮ್ ತುರ್ತು ಪರಿಹಾರ ಕಾರ್ಯಾಚರಣೆಯ ಪರಿಣಾಮಕಾರಿ ಅನುಷ್ಠಾನ ಹಾಗೂ ವಿವಿಧ ಇಲಾಖೆಗಳ ಸಂಘಟಿತ ಪ್ರತಿಕ್ರಿಯೆ ಮತ್ತು ಸನ್ನದ್ಧತೆಯನ್ನು ಪರೀಕ್ಷಿಸಿ ಮೌಲ್ಯಮಾಪನ ಮಾಡುವುದು ಇದರ ಉದ್ದೇಶವಾಗಿದೆ. ವಿಪತ್ತು ನಿರ್ವಹಣಾ ಅಭ್ಯಾಸದ ಭಾಗವಾಗಿ ನವೆಂಬರ್ 26ರಂದು ಟೇಬಲ್ ಟಾಪ್ ಕಾರ್ಯಾಚರಣೆ ನಡೆಯಲಿದೆ.

ವಿಮಾನ ನಿಲ್ದಾಣದ ಆವರಣದೊಳಗಿನ ತುರ್ತು ಪರಿಸ್ಥಿತಿಗಿಂತ ಭಿನ್ನವಾಗಿ, ಈ ಬಾರಿ ವಿಮಾನ ನಿಲ್ದಾಣದ ಗಡಿಗೆ ಹೊಂದಿಕೊಂಡಿರುವ ಸಮತಟ್ಟಾದ  ಹೊರ ಪ್ರದೇಶದಲ್ಲಿ ವಿಮಾನ ಅಪಘಾತ ಸಂಭವಿಸಿದ ಸನ್ನಿವೇಶವನ್ನು ಸೃಷ್ಟಿಸಲಾಗುತ್ತದೆ. ವಿಮಾನ ನಿಲ್ದಾಣದ ರಕ್ಷಣಾ ಮತ್ತು ಅಗ್ನಿಶಾಮಕ ತಂಡವು ಮೊದಲ  ಸ್ಪಂದನಾ ತಂಡವಾಗಿ ಕಾರ್ಯನಿರ್ವಹಿಸಲಿದೆ. ತುರ್ತು ನಿರ್ವಹಣಾ ವ್ಯವಸ್ಥೆಗೆ ಅನುಗುಣವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಕಮಾಂಡ್, ನಿಯಂತ್ರಣ ಮತ್ತು ಸಮನ್ವಯದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದೆ.

ಈ ಸಮಗ್ರ ಅಣಕು ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಮಂಗಳೂರು ನಗರ ಪೆÇಲೀಸ್, ಆರೋಗ್ಯ ಇಲಾಖೆ, ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಸಂಸ್ಥೆಗಳು, ಆಸ್ಪತ್ರೆಗಳು ಹಾಗೂ ಇತರ ಸಂಬಂಧಿತ ಇಲಾಖೆ, ಸಂಸ್ಥೆಗಳು ಭಾಗವಹಿಸಲಿವೆ. ಗಂಭೀರ ವಿಮಾನ ತುರ್ತು ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸನ್ನದ್ಧತೆ, ಸ್ಪಂದಿಸುವ ಸಾಮಥ್ರ್ಯ ಹಾಗೂ ವಿವಿಧ ಸಂಸ್ಥೆಗಳ ನಡುವಿನ ಸಮನ್ವಯವನ್ನು ಪರೀಕ್ಷಿಸುವುದು ಇದರ ಪ್ರಮುಖ ಉದ್ದೇಶವಾಗಿದೆ.

ಈ ಕಾರ್ಯಾಚರಣೆಯು ತುರ್ತು ಕಾರ್ಯಾಚರಣೆಯ ಕೊರತೆಗಳನ್ನು ಗುರುತಿಸಲು, ನಿಗದಿತ ಕಾರ್ಯವಿಧಾನಗಳನ್ನು ಪರಿಶೀಲಿಸಲು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಮತ್ತಷ್ಟು ಬಲಪಡಿಸಲು ನೆರವಾಗಲಿದೆ.

ನವೆಂಬರ್ 27 ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆಯುವ ಅಣಕು ಕಾರ್ಯಾಚರಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಮಾನ ನಿಲ್ದಾಣ, ಪೊಲೀಸ್ ಹಾಗೂ ವಿವಿಧ ಇಲಾಖೆಗಳ ಸಭೆ ನಡೆಯಿತು.

ಅಪರ ಜಿಲ್ಲಾಧಿಕಾರಿ ಕೆ. ರಾಜು ಮಾತನಾಡಿ, ನ.26 ರಂದು ಬೆಳಿಗ್ಗೆ 9:55 ರಿಂದ 11:38 ಗಂಟೆಯವರೆಗೆ ಈ ಅಣಕು ಪ್ರದರ್ಶನ ನಡೆಯಲಿದೆ. ಈ ಕಾರ್ಯಾಚರಣೆಯನ್ನು ಎಲ್ಲಾ ಇಲಾಖೆಯವರು ಗಂಭೀರವಾಗಿ ಪರಿಗಣಿಸಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯಾಚರಿಸಬೇಕು. ನೈಜ ಘಟನೆ ಆಗುವ ಸಂದರ್ಭದಲ್ಲಿ ಉಂಟಾಗುವ ಸಮನ್ವಯ ಕೊರತೆ ಹಾಗೂ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುವ ಸಲುವಾಗಿ ಈ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಮಂಗಳೂರು ಉಪವಿಭಾಗಾಧಿಕಾರಿ (ಪ್ರಭಾರ) ಶ್ರೀಧರ್ ಮುಂದಲಮನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version