ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

Spread the love

ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ

​ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿ ಕಾರ್ಯಕ್ರಮ ಶುಕ್ರವಾರ ನಗರದ ರಾಜಾಜಿ ಉದ್ಯಾನವನದಲ್ಲಿ ಆಚರಿಸಲಾಯಿತು.

ಮಹಾತ್ಮ ಗಾಂಧೀಜಿ ಪ್ರತಿಮೆಗೆ ಖಾದಿ ಹಾರ ಮತ್ತು ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಲಾಯಿತು.

ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ, ಗಾಂಧೀಜಿಯವರ ಬದುಕೇ ಇತರರಿಗೆ ಮಾದರಿಯಾಗಿದೆ. ಅವರು ಮಾತನ್ನಾಡಿದ್ದಕ್ಕಿಂತಲೂ ಇತರರ ಮಾತನ್ನು ಗೌರವದಿಂದ ಆಲಿಸಿ ಪ್ರತಿ ವ್ಯಕ್ತಿಗೆ ಗೌರವ ನೀಡಿದ್ದರು. ಇದುವೇ ಸ್ವಾತಂತ್ರ್ಯ ಹೋರಾಟದಲ್ಲಿ ಅವರನ್ನು ದೇಶದ ನಾಯಕನಾಗಿ ಮಾಡಿತ್ತು ಎಂದರು.
ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಾಹೀದ್, ಪರಿಸರ ಪ್ರವಾಸೋದ್ಯಮ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಶ್ವಾಸ್ ಕುಮಾರ್ ದಾಸ್ ಮಾತನಾಡಿದರು.

ಸಮಾರಂಭದಲ್ಲಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಪೊಲೀಸ್ ಅಧೀಕ್ಷಕ ಅರುಣ್ ಕೆ., ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಡಿಸಿಪಿ ಸ್ಯಾಮ್ ವರ್ಗಿಸ್, ಡಿ. ಡಿ. ಪಿ ಐ ಶಶಿಧರ್, ಭಾರತ್ ಸೇವಾ ದಳದ ಮುಖಂಡರಾದ ಬಶೀರ್ ಬೈಕಂಪಾಡಿ, ಟಿ ಕೆ ಸುಧೀರ್ ಮತ್ತಿತರರು ಉಪಸ್ಥಿತರಿದ್ದರು.
​

ಸಮಾರಂಭದಲ್ಲಿ ಸರ್ವ ಧರ್ಮ ಪ್ರಾರ್ಥನೆ ಹಾಗೂ ಗಾಂಧೀಜಿಯವರಿಗೆ ಪ್ರಿಯವಾದ ‘ರಘುಪತಿ ರಾಘವ ರಾಜಾರಾಮ್’ ಹಾಗೂ ‘ವೈಷ್ಣವ ಜನತೋ’ ಭಜನೆಗಳ ಗಾಯನ ಪ್ರಸ್ತುತಪಡಿಸಲಾಯಿತು.

ಗಾಂಧಿ ಜಯಂತಿ ಅಂಗವಾಗಿ ವಾರ್ತಾ ಇಲಾಖೆ ಪ್ರಕಟಸಿರುವ ವಿಶೇಷ ಸಂಚಿಕೆಗಳನ್ನು ಸಮಾರಂಭದಲ್ಲಿ ಬಿಡುಗಡೆಗೊಳಿಸಲಾಯಿತು.
​

ಬಾಪೂಜಿ ಪ್ರಬಂಧ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ:
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಯಂತಿಯ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಸ್ನಾತಕ-ಸ್ನಾತಕೋತ್ತರ ಪದವಿ ವಿಭಾಗಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವೇದಿಕೆಯಲ್ಲಿದ್ದ ಗಣ್ಯರು ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.

​ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ ಸ್ವಾಗತಿಸಿದರು. ಸೈದುದ್ದೀನ್ ನಿರೂಪಿಸಿದರು.


Spread the love
Subscribe
Notify of

0 Comments