ಬಿಗ್ ಬಾಸ್ ಕನ್ನಡ 12ರಲ್ಲಿ ಐತಿಹಾಸಿಕ ಜಯ ಕಂಡ ಗಿಲ್ಲಿ ನಟ; ರಕ್ಷಿತಾ ರನ್ನರ್ ಅಪ್
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ 23 ಸ್ಪರ್ಧಿಗಳನ್ನು ಹಿಂದಿಕ್ಕಿ ಗಿಲ್ಲಿ ನಟ ವಿನ್ ಆಗಿದ್ದಾರೆ. ಗಿಲ್ಲಿ ಕೈನ ಎತ್ತೋ ಮೂಲಕ ಸುದೀಪ್ ವಿನ್ನರ್ ಘೋಷಣೆ ಮಾಡಿದರು. ಅವರಿಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ. 40 ಕೋಟಿಗೂ ಅಧಿಕ ವೋಟ್ ಪಡೆದು ಗೆಲುವು ಸಾಧಿಸಿದ್ದಾರೆ ಗಿಲ್ಲಿ ನಟ. ಅವರ ಅಭಿಮಾನಿಗಳ ಆಸೆ ಈಡೇರಿದೆ. ರಕ್ಷಿತಾಗೆ ರನ್ನರ್ ಅಪ್ ಸ್ಥಾನ ಸಿಕ್ಕಿದೆ.
ಈ ಮೊದಲು ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಸಿ ಗಿಲ್ಲಿ ನಟ ಗಮನ ಸೆಳೆದರು. ಎಲ್ಲಾ ಶೋಗಲ್ಲಿ ಅವರು ರನ್ನರ್ ಅಪ್ ಸ್ಥಾನಕ್ಕೆ ಖುಷಿಪಟ್ಟುಕೊಳ್ಳಬೇಕಿತ್ತು.ಇದನ್ನು ಗಿಲ್ಲಿ ಕೂಡ ಹೇಳಿಕೊಂಡಿದ್ದರು. ಅವರಿಗೆ ಈ ವಿಷಯದಲ್ಲಿ ತುಂಬಾನೇ ಬೇಸರ ಇತ್ತು. ಕೊನೆಗೂ ಗಿಲ್ಲಿಗೆ ಗೆಲುವು ಸಿಕ್ಕಿದೆ. ಅವರು ಬರೋಬ್ಬರಿ 40 ಕೋಟಿಗೂ ಅಧಿಕ ಮತ ಪಡೆದಿದ್ದಾರೆ.
ಕಳೆದ ಬಾರಿಯ ವಿನ್ನರ್ ಹನುಮಂತ 5 ಕೊಟಿ ವೋಟ್ ಪಡೆದಿದ್ದರು. ಇದಕ್ಕಿಂತ ಹತ್ತು ಪಟ್ಟು ವೋಟ್ನ ಗಿಲ್ಲಿ ಪಡೆದುಕೊಂಡಿದ್ದಾರೆ ಎಂಬುದು ವಿಶೇಷ.
ಗಿಲ್ಲಿಗೆ 50 ಲಕ್ಷ ಕ್ಯಾಶ್ ಪ್ರೈಸ್ ಸಿಕ್ಕಿದೆ. ಇದರ ಜೊತೆಗೆ ಮಾರುತಿ ಸುಜುಕಿ ವಿಕ್ಟರಿಸ್ ಕಾರ್ ಅವರ ಕೈ ಸೇರಿದೆ. ಇದು ಅವರ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ.













