ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ –ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ

Spread the love

ಶೆಟ್ರಕಟ್ಟೆ ತಿರುವಿನಲ್ಲಿ ಸರ್ಕಾರಿ ಬಸ್ –ಟಿಪ್ಪರ್ ಅಪಘಾತ: ಕಾಲೇಜು ವಿದ್ಯಾರ್ಥಿಗಳು ಗಂಭೀರ

ಕುಂದಾಪುರ: ಸರ್ಕಾರಿ ಬಸ್ ಹಾಗೂ ಟಿಪ್ಪರ್ ನಡುವಿನ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಲ್ಲೂರು-ನೇರಳಕಟ್ಟೆ ಮಾರ್ಗದ ಶೆಟ್ರಕಟ್ಟೆ ತಿರುವಿನಲ್ಲಿ ನಡೆದಿದೆ.

ಕುಂದಾಪುರದಿಂದ ಆಜ್ರಿ-ಸಿದ್ದಾಪುರ ಕಡೆಗೆ ಸಾಗುತ್ತಿದ್ದ ಸರ್ಕಾರಿ ಬಸ್ ಗೆ ನೇರಳಕಟ್ಟೆಯಿಂದ ಮಣ್ಣು ತುಂಬಿಸಿಕೊಂಡು ತಲ್ಲೂರಿನತ್ತ ಸಾಗುತ್ತಿದ್ದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಬಸ್ ನ ಬಲ ಬದಿಗೆ ಢಿಕ್ಕಿ ಹೊಡೆದಿದ್ದರಿಂದ ಚಾಲಕನ ಬದಿಯ ಒಂದು ಪಾರ್ಶ್ವ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಗಂಭೀರ ಗಾಯಗಳಾಗಿವೆ.

ಸಂಜೆ ಸಮಯವಾದ್ದರಿಂದ ಬಸ್ ನಲ್ಲಿ ಬಹುತೇಕ ಕಾಲೇಜು ವಿದ್ಯಾರ್ಥಿಗಳಿದ್ದು, ಕಿಟಿಕಿ ಬದಿಯಲ್ಲಿ ಕೂತವರೆಲ್ಲರಿಗೂ ಗಂಭೀರ ಗಾಯಗಳಾಗಿದೆ. ಸ್ಥಳೀಯ ಯುವಕ ಪ್ರಶಾಂತ್ ಪೂಜಾರಿ ಕರ್ಕಿ ಹಾಗೂ ಸಾರ್ವಜನಿಕರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.


Spread the love
Subscribe
Notify of

0 Comments
Inline Feedbacks
View all comments