Home Mangalorean News Kannada News ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

Spread the love

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

ಉಡುಪಿ: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳ ಮರುಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸಿವೆ. ಈ ಪ್ರಕ್ರಿಯೆ ಆಗಸ್ಟ್ 31ರವರೆಗೆ ನಡೆಯಲಿದೆ.

ಈಗಾಗಲೇ ಉಡುಪಿ ತಾಲೂಕಿನಲ್ಲಿ ಮರುಪರಿಶೀಲನೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಗೃಹ ಜ್ಯೋತಿ ಫಲಾನುಭವಿಗಳು ಕೂಡಲೇ ಮರುಪರಿಶೀಲನೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು, ಹತ್ತಿರದ ಮೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಮರುಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.


Spread the love

Exit mobile version