Home Mangalorean News Kannada News ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ

Spread the love

ಗೃಹಲಕ್ಷ್ಮಿಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಿದ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹ ಲಕ್ಷ್ಮಿಗೆ ಮೂರು ವರ್ಷಗಳ ಸಂಭ್ರಮದ ಸವಿನೆನಪಿಗಾಗಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಭಾನುವಾರ ರಾತ್ರಿ ಗುಲಾಬಿ ಬಣ್ಣ(ಪಿಂಕ್ ಲೈಟ್)ದ ಬೆಳಕಿನಲ್ಲಿ ಕಂಗೊಳಿಸಿತು.

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪ್ರತಿ ಮನೆಯ ಯಜಮಾನಿಗೆ ಪ್ರತಿ ತಿಂಗಳು ರೂ 2,000/- ನೀಡುವ ಮೂಲಕ ಮಹಿಳೆಯರು ಸ್ವಾವಲಂಬಿಜೀವನ ರೂಪಿಸಿಕೊಳ್ಳಲು ನೆರವಾಗಿರುವ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬಂದು ಇದೇ ಆ.30ಕ್ಕೆ ಮೂರು ವರ್ಷಗಳನ್ನು ಪೂರೈಸಲಿದೆ.

ಸರ್ಕಾರವು ಗೃಹಲಕ್ಷ್ಮೀ ಯೋಜನೆ ಮೂರು ವರ್ಷಗಳನ್ನು ಪೂರೈಸುತ್ತಿರುವ ಈ ಸುಸಂದರ್ಭದಲ್ಲಿ ಮಹಿಳೆಯರ ಹೆಮ್ಮೆಯ ಸಂಕೇತವೆಂದು ಗುರುತಿಸಿರುವ ಗುಲಾಬಿ(PINK) ಬಣ್ಣದ ಬೆಳಕಿನ ವ್ಯವಸ್ಥೆಯನ್ನು ಮಾಡಲಾಗಿದೆ.

ಇದುವರೆಗೂ ಗೃಹಲಕ್ಷ್ಮಿ ಯೋಜನೆ ಅಡಿ 1.20ಕೋಟಿ ಫಲನುಭವಿಗಳ ಖಾತೆಗೆ 76500ಕೋಟಿಗೂ ಹೆಚ್ಚು ಹಣ ಪಾವತಿಸಲಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಈ ವಿದ್ಯದ್ದೀಪಾಲಂಕಾರ ಆಯೋಜಿಸಿತ್ತು.


Spread the love

Exit mobile version