ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ನೇಮಕ
ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಶರ್ಫುದ್ದೀನ್ ಶೇಖ್ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಕೊಡವೂರು ಮತ್ತು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ರಮೇಶ್ ಕಾಂಚನ್ರವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಜನಾಬ್ ಅಬ್ದುಲ್ ಜಬ್ಬಾರ್ ಸಾಹೇಬ್ರ ಅದೇಶದಂತೆ ನಿಮ್ಮನ್ನು ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರನ್ನಾಗಿ ನೇಮಕಾತಿ ಮಾಡಲಾಗಿದ್ದು, ಈ ಆದೇಶದಂತೆ ತಕ್ಷಣ ತಾವು ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪಕ್ಷ ಸಂಘಟಿಸಲು ಕಾರ್ಯೋನ್ಮುಖರಾಗುವಂತೆ ಆದೇಶದಲ್ಲಿ ಸೂಚಿಸಿದ್ದಾರೆ.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಭೆಯಲ್ಲಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರಿಗೆ ನೇಮಕಾತಿ ಅದೇಶವನ್ನು ನೀಡಲಾಯಿತು.
ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮಾಜಿ ಸಚಿವರಾದ ಕೆ ಜಯಪ್ರಕಾಶ್ ಹೆಗ್ಡೆ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಶರ್ಫುದ್ದೀನ್ ಶೇಖ್ ಹಾಗೂ ಇತರರು ಉಪಸ್ಥಿತರಿದ್ದರು.
ಹಮ್ಮದ್ ಇಬ್ರಾಹಿಂ ಸಾಹೇಬ್ ಜಿಲ್ಲಾ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾಗಿ ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಸ್ಪರ್ಧಿಸಿ ಜಯಗಳಿಸಿ ಬಳಿಕ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಪದೋನ್ನತಿ ಹೊಂದಿದ್ದರು. ಪ್ರಸ್ತುತ ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.