ಹನೂರು ಗುಂಡೇಟು ಪ್ರಕರಣ: SIT ತನಿಖೆಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಐವನ್ ಡಿ’ಸೋಜಾ ಒತ್ತಾಯ

Spread the love

ಹನೂರು ಗುಂಡೇಟು ಪ್ರಕರಣ: SIT ತನಿಖೆಗೆ ಹಾಗೂ ಸಂತ್ರಸ್ತ ಕುಟುಂಬಗಳಿಗೆ ಪರಿಹಾರ, ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಲು ಐವನ್ ಡಿ’ಸೋಜಾ ಒತ್ತಾಯ

ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಉಪಾಧ್ಯಕ್ಷರಾದ ಐವನ್ ಡಿ’ಸೋಜಾ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ವಿಧಾನ ಪರಿಷತ್ ಕಲಾಪದ ಮೂಲಕ ಹಾಗೂ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಅರಣ್ಯ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ, ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದ ಗುಂಡೇಟಿನ ಘಟನೆಯ ಕುರಿತು ಸರ್ಕಾರ ತಕ್ಷಣ ಗಂಭೀರವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಘಟನೆಗೆ ಸಂಬಂಧಿಸಿದಂತೆ ಸಮಗ್ರ, ನಿಷ್ಪಕ್ಷಪಾತ ಹಾಗೂ ಪರಿಣಾಮಕಾರಿ ತನಿಖೆ ನಡೆಸಲು ವಿಶೇಷ ತನಿಖಾ ತಂಡ (SIT) ರಚಿಸಬೇಕು. ಘಟನೆಯ ಸತ್ಯಾಸತ್ಯತೆ ಸಂಪೂರ್ಣವಾಗಿ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಸಂತ್ರಸ್ತ ಕುಟುಂಬಗಳಿಗೆ ನ್ಯಾಯಯುತ ನ್ಯಾಯ ಒದಗಿಸಬೇಕು ಎಂದು ಶ್ರೀ ಐವನ್ ಡಿ’ಸೋಜಾ ಅವರು ಸರ್ಕಾರವನ್ನು ಒತ್ತಾಯಿಸಿದರು.

ಈ ಕುರಿತು ಮುಖ್ಯಮಂತ್ರಿ ಹಾಗೂ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಗುಂಡೇಟಿಗೆ ಬಲಿಯಾದವರ ಕುಟುಂಬಗಳ ದುಃಖವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅವರಿಗೆ ಸರ್ಕಾರದಿಂದ ಸೂಕ್ತ ಹಾಗೂ ಸಮರ್ಪಕ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.ಅಲ್ಲದೆ, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿರುವ ಕುಟುಂಬಗಳ ಮಕ್ಕಳ ಭವಿಷ್ಯಕ್ಕೆ ಸರ್ಕಾರ ವಿಶೇಷ ಗಮನ ನೀಡಬೇಕು. ಗುಂಡೇಟಿಗೆ ಬಲಿಯಾದವರ ಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಂಡು, ಅವರ ಮುಂದಿನ ಶಿಕ್ಷಣಕ್ಕೆ ಅಗತ್ಯವಿರುವ ನೆರವನ್ನು ಸರ್ಕಾರದ ವತಿಯಿಂದ ಒದಗಿಸಬೇಕು ಎಂದು ಶ್ರೀ ಐವನ್ ಡಿ’ಸೋಜಾ ಅವರು ಒತ್ತಾಯಿಸಿದರು.

ಸಂತ್ರಸ್ತ ಕುಟುಂಬಗಳಿಗೆ ನ್ಯಾಯ, ಸೂಕ್ತ ಪರಿಹಾರ ಹಾಗೂ ಮಕ್ಕಳಿಗೆ ಉತ್ತಮ ಭವಿಷ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದರು.


Spread the love
Subscribe
Notify of

0 Comments