Home Mangalorean News Kannada News ಭಾರೀ ಮಳೆ: ನಾಳೆ (ಆ.4) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ...

ಭಾರೀ ಮಳೆ: ನಾಳೆ (ಆ.4) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ನಾಳೆ (ಆ.4) ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಹವಾಮಾನ ಮುನ್ಸೂಚನೆಯಂತೆ ಉಡುಪಿ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢ  ಶಾಲೆಳಿಗೆ ಆಗಸ್ಟ್ 4 ರಂದು ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ ಪೂರ್ವ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೊತ್ತರ ಪದವಿ ಹಾಗೂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿರುವುದಿಲ್ಲ.


Spread the love

Exit mobile version