ಉಚ್ಚ ನ್ಯಾಯಾಲಯದ ದಸ್ತಗಿರಿ ವಾರೆಂಟ್: ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Spread the love

ಉಚ್ಚ ನ್ಯಾಯಾಲಯದ ದಸ್ತಗಿರಿ ವಾರೆಂಟ್: ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಮಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದಿಂದ ಹೊರಡಿಸಲಾಗಿದ್ದ ದಸ್ತಗಿರಿ ವಾರೆಂಟ್ ಆಧಾರದ ಮೇಲೆ ಪ್ರಕರಣವೊಂದರಲ್ಲಿ ಶಿಕ್ಷೆಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಪರಾಧ ಕ್ರಮಾಂಕ 59/2013ರ ಕಲಂ 394 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ಎಸ್‌ಸಿ ನಂ.65/2013ರ ಪ್ರಕರಣದಲ್ಲಿ ಶಿಕ್ಷೆಯಾಗಿದ್ದ 2ನೇ ಆರೋಪಿ ಮೊಹಮ್ಮದ್ ಮುಸ್ತಾಫಾ @ ಮುಸ್ತಾಫಾ (36) ಎಂಬಾತನ ವಿರುದ್ಧ ಉಚ್ಚ ನ್ಯಾಯಾಲಯ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.

ಪ್ರಕರಣದ ಶಿಕ್ಷಾ ಆದೇಶದ ವಿರುದ್ಧ ಆರೋಪಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಕ್ರಿಮಿನಲ್ ಅಪೀಲು ನಂ.602/2015 ದಾಖಲಿಸಿದ್ದ. ಆದರೆ ಅಪೀಲು ದಾಖಲಿಸಿದ ಬಳಿಕ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಗೈರುಹಾಜರಾಗಿದ್ದ ಹಿನ್ನೆಲೆಯಲ್ಲಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಉಚ್ಚ ನ್ಯಾಯಾಲಯ ಆದೇಶಿಸಿತ್ತು.

ಈ ಹಿನ್ನೆಲೆಯಲ್ಲಿ ಅ.6ರಂದು ಬೆಳಿಗ್ಗೆ ಆರೋಪಿಯ ಪ್ರಸ್ತುತ ವಿಳಾಸವಾದ ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಸ ನಗರದಲ್ಲಿರುವ ಮನೆಗೆ ಪೊಲೀಸರು ತೆರಳಿ ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಅವರು ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಹೆಡ್ ಕಾನ್‌ಸ್ಟೆಬಲ್‌ಗಳಾದ ಕಮಲಾಕ್ಷ, ಮೆಲ್ವಿನ್ ಪಿಂಟೊ, ಹನುಮರೆಡ್ಡಿ, ಕಾನ್‌ಸ್ಟೆಬಲ್‌ಗಳಾದ ರಮೇಶ್ ಹಾಗೂ ಬಿರೇಂದ್ರ ಸೇರಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಸಿಬ್ಬಂದಿ ಪಾಲ್ಗೊಂಡಿದ್ದರು. ಉಪ್ಪಿನಂಗಡಿ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Spread the love
Subscribe
Notify of

0 Comments