ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ

Spread the love

ಹಿಜಾಬ್‌ಗೆ ಮತ್ತೆ ಅವಕಾಶ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್‌ವೆಲ್ ಕಿಡಿ

ಮಂಗಳೂರು: ರಾಜ್ಯದಲ್ಲಿ ಮತ್ತೆ ಹಿಜಾಬ್ ಧರಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ತೀವ್ರವಾಗಿ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಶಾಲೆ ಹಾಗೂ ಕಾಲೇಜುಗಳಲ್ಲಿ ಸಮಾನತೆ ಕಾಪಾಡುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ನಿಷೇಧಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಸರ್ಕಾರ ಮತ್ತೆ ಹಿಜಾಬ್‌ಗೆ ಅವಕಾಶ ನೀಡಿರುವುದು ಧರ್ಮದ ಓಲೈಕೆ ರಾಜಕಾರಣವಾಗಿದೆ ಎಂದು ಆರೋಪಿಸಿದರು.

YouTube player

ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಈ ಆದೇಶ ಹೊರಡಿಸಿದೆ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಕೇಸರಿ ಶಾಲ್ ಧರಿಸಿ ಬರುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಹೇಳಿದರು.

ಅಂತಹ ವಿದ್ಯಾರ್ಥಿಗಳಿಗೆ ವಿಎಚ್‌ಪಿ ಹಾಗೂ ಬಜರಂಗದಳ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಎಚ್ಚರಿಕೆ ನೀಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಸಂಘರ್ಷ ಉಂಟಾದರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಹೇಳಿದರು.

ಹೀಗಾಗಿ ಹಿಜಾಬ್‌ಗೆ ಅವಕಾಶ ನೀಡಿರುವ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಶರಣ್ ಪಂಪ್‌ವೆಲ್ ಆಗ್ರಹಿಸಿದರು.

ಬಂಟ್ವಾಳ ತಾಲೂಕಿನ ಗೂಡಿನಬಳಿ ಪ್ರದೇಶದಲ್ಲಿ ನಡೆದ ಉರುಸ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿರುವ ಎಸ್ಡಿಪಿಐ ಮುಖಂಡನ ವಿರುದ್ಧ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು .
ಉರುಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಎಸ್ಡಿಪಿಐ ಮುಖಂಡ “ಗೋಮಾಂಸ ತಿನ್ನುವುದು ನಮ್ಮ ಹಕ್ಕು” ಎಂದು ಹೇಳಿರುವುದಲ್ಲದೆ, “ಇದನ್ನು ಪ್ರಶ್ನಿಸಲು ಯಾರಾದರೂ ಬಂದರೆ ಕೈಕಟ್ಟಿ ಕುಳಿತುಕೊಳ್ಳಬೇಡಿ, ನಿಮ್ಮದೇ ರೀತಿಯಲ್ಲಿ ಉತ್ತರ ಕೊಡಿ” ಎಂದು ಹೇಳುವ ಮೂಲಕ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ಅದನ್ನು ಮೀರಿ ಗೋಮಾಂಸ ಸೇವನೆ ಮಾಡುತ್ತೇವೆ ಎಂದು ಹೇಳಿದರೆ ಅದನ್ನು ಕಾನೂನಾತ್ಮಕವಾಗಿ ತಡೆಯುವ ಹಕ್ಕು ನಮಗಿದೆ ಎಂದು ಶರಣ್ ಪಂಪ್ವೆಲ್ ಹೇಳಿದರು.
ಪ್ರಚೋದನಾತ್ಮಕ ಹೇಳಿಕೆ ನೀಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸಿರುವ ಎಸ್ಡಿಪಿಐ ಮುಖಂಡನ ವಿರುದ್ಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.


Spread the love
Subscribe
Notify of

0 Comments