ಹಿಂದೂ ಸಂಘಟನೆ ಮುಖಂಡ ಮಂಜು ಕೊಳಗೆ ಚೂರಿ ಇರಿತ

Spread the love

ಹಿಂದೂ ಸಂಘಟನೆ ಮುಖಂಡ ಮಂಜು ಕೊಳಗೆ ಚೂರಿ ಇರಿತ

ಉಡುಪಿ: ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕರಿಬ್ಬರು ಚೂರಿ ಇರಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಮಾಹಿತಿಗಳ ಪ್ರಕಾರ ಮಂಜು ಕೊಳ ಅವರು ಮಂಗಳವಾರ ಸಂಜೆ ಮಲ್ಪೆ ಬೀಚ್ ಬಳಿ ಪಲಿಮಾರು ಭಾಗ ಜೋಡಿಯೊಂದರ ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ಕರೆದಿದ್ದರು ಎನ್ನಲಾಗಿದೆ. ಈ ವೇಳೆ ಪರಸ್ಪರ ಮಾತಿಗೆ ಮಾತು ಬೆಳೆದು ಯುವಕನೋರ್ವ ಮಂಜು ಕೊಳ ಅವರಿಗೆ ಚೂರಿ ಇರಿದಿದ್ದಾನೆ. ಹೊಟ್ಟೆಯ ಭಾಗಕ್ಕೆ ಇರಿದ ಪರಿಣಾಮ ಮಂಜು ಕೊಳ ಅವರು ಕುಸಿದು ಬಿದ್ದಿದ್ದು, ಅವರನ್ನು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚೂರಿ ಇರಿದ ಯುವಕರಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ. ವೈಯುಕ್ತಿಕ ವಿಚಾರಕ್ಕೆ ಸಂಬಂಧಿಸಿ ಘಟನೆ ನಡೆದಿದ್ದು ಗಾಯಗೊಂಡಿರುವ ಮಂಜು ಕೊಳ ಅವರು ಅಪಾಯದಿಂದ ಪಾರಾಗಿದ್ದಾರೆ.ಯಾವುದೇ ರೀತಿಯ ಗಾಳಿ ಸುದ್ದಿಗಳಿಗೆ ಅವಕಾಶ ನೀಡಬಾರದು ಎಂದು ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

 


Spread the love
Subscribe
Notify of

0 Comments
Inline Feedbacks
View all comments