ಮುಕ್ಕ ಬಳಿ ಲಾರಿ – ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ: ಓರ್ವ ಮೃತ್ಯು
ಮಂಗಳೂರು : ಮುಕ್ಕ ಸಮೀಪ ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ತ್ವರಿತವಾಗಿ ಸ್ಥಳಾಂತರಿಸುವ ಮೂಲಕ ಪೊಲೀಸ್ ಅಧಿಕಾರಿ ಕೃಷ್ಣ ಸಮಯಪ್ರಜ್ಞೆ ಮೆರೆದಿದ್ದಾರೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ನಿವಾಸಿ ಭೀಮ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಭಿಸಿದ ಮಾಹಿತಿಯಂತೆ, ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿ ಕೃಷ್ಣ ಅವರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು ಮೃತದೇಹವನ್ನು ತಕ್ಷಣ ಆಂಬುಲೆನ್ಸ್ಗೆ ಸ್ಥಳಾಂತರಿಸುವ ವ್ಯವಸ್ಥೆ ಮಾಡಿದರು.