ಮಂಗಳೂರಿನ ಕಾವೂರು ಮುಖ್ಯ ರಸ್ತೆಯಲ್ಲಿ ಭೀಕರ ಅಪಘಾತ: ಸ್ಕೂಟರ್ ಸವಾರರಿಗೆ ಗಂಭೀರ ಗಾಯ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಮುಖ್ಯ ರಸ್ತೆಯಲ್ಲಿ ಸ್ಕೂಟರ್ ಹಾಗೂ ಎರಡು ಬೈಕ್ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ಸಾರ್ವಜನಿಕರು ನೆರವಿಗೆ ಧಾವಿಸಿ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮುಖ್ಯ ರಸ್ತೆಯಾಗಿದ್ದರೂ ಅಪಘಾತದ ಸಮಯದಲ್ಲಿ ವಾಹನ ಸಂಚಾರ ಕಡಿಮೆ ಇದ್ದ ಕಾರಣ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ.
