Home Mangalorean News Kannada News ಉಡುಪಿಯಲ್ಲಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿಯಲ್ಲಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ

Spread the love

ಉಡುಪಿಯಲ್ಲಿ ಮನೆಗಳ್ಳತನ: ಇಬ್ಬರು ಆರೋಪಿಗಳ ಬಂಧನ, ₹23.56 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಸರಣಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದು, ಅವರಿಂದ ಚಿನ್ನಾಭರಣ, ಬೆಳ್ಳಿ ಆಭರಣ, ವಿದೇಶಿ ಕರೆನ್ಸಿ, ನಗದು, ವಾಹನಗಳು ಹಾಗೂ ಮೊಬೈಲ್ ಫೋನ್ಗಳು ಸೇರಿದಂತೆ ಒಟ್ಟು ₹23,56,230 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಅರುಣ್ ಎಸ್.ವಿ. (43) ಹಾಗೂ ಕೌಶಿಕ್ (19) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಪೆರಂಪಳ್ಳಿ ಸಂತೋಷನಗರದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ ಸುಮಾರು ₹2 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ಮತ್ತು ನೋಟುಗಳು, 1 ಕೆಜಿ 360 ಗ್ರಾಂ ಬೆಳ್ಳಿ ಆಭರಣಗಳು, ₹22,500 ಮೌಲ್ಯದ 1.45 ಗ್ರಾಂ ಚಿನ್ನದ ನಾಣ್ಯಗಳು, ₹13,26,000 ಮೌಲ್ಯದ 88.400 ಗ್ರಾಂ ಚಿನ್ನ, ₹33,000 ನಗದು, ₹4 ಲಕ್ಷ ಮೌಲ್ಯದ ಆಟೋರಿಕ್ಷಾ, ₹13,000 ಮೌಲ್ಯದ ಎರಡು ಮೊಬೈಲ್ ಫೋನ್ಗಳು, ಕೃತ್ಯಕ್ಕೆ ಬಳಸಿದ್ದ ₹45,000 ಮೌಲ್ಯದ ಕಳ್ಳತನದ ಪಲ್ಸರ್ ಬೈಕ್ ಹಾಗೂ ₹30,000 ಮೌಲ್ಯದ ವಿದೇಶಿ ಕೈಗಡಿಯಾರವನ್ನು ವಶಪಡಿಸಿಕೊಳ್ಳಲಾಗಿದೆ.

ತನಿಖೆಯ ವೇಳೆ ಆರೋಪಿಗಳು ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಂಡು, ಕಳ್ಳತನ ಮಾಡಿದ್ದ ಪಲ್ಸರ್ ಬೈಕ್ನಲ್ಲಿ ತೆರಳಿ ಬಾಗಿಲುಗಳನ್ನು ಮುರಿದು ಕಳವು ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ. ಉಡುಪಿ ನಗರ ಮತ್ತು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿರುವ ಐದು ಕಳ್ಳತನ ಪ್ರಕರಣಗಳಲ್ಲಿ ಇವರಿಬ್ಬರು ಭಾಗಿಯಾಗಿರುವುದು ತನಿಖೆಯಿಂದ ದೃಢಪಟ್ಟಿದೆ.

ಉಡುಪಿ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ, ಕೊಡಂಕೂರು ಗ್ರಾಮದ ಶಶಿರೇಖಾ ಅವರ ಮನೆಯಲ್ಲಿ ನಡೆದ ಕಳ್ಳತನ ಹಾಗೂ ಪುತ್ತೂರು ಗ್ರಾಮದ ಭಗವತಿ ಲೇಔಟ್ನ ಸನಂ ಅವರ ಮನೆಯಲ್ಲಿ ನಡೆದ ಕಳ್ಳತನ ಸೇರಿವೆ. ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನೇಜಾರು ಮಸೀದಿ ಬಳಿಯ ಗ್ಯಾರೇಜ್ನಿಂದ ಸಂದೇಶ್ ಅವರ ಪಲ್ಸರ್ ಬೈಕ್ ಕಳ್ಳತನ, ಕೆಳಾರ್ಕಳಬೆಟ್ಟು ನಿವಾಸಿ ತೃಪ್ತಿ ಅವಿನಾಶ್ ಅವರ ಮನೆಯಲ್ಲಿ ನಡೆದ ಕಳ್ಳತನ ಮತ್ತು ಅದೇ ಪ್ರದೇಶದ ರವಿ ಉಪಾಧ್ಯ ಅವರ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಗಳು ಸೇರಿವೆ.

ಆರೋಪಿಗಳ ಬಂಧನಕ್ಕೆ ಕಾರಣವಾದ ಪ್ರಕರಣದಲ್ಲಿ, ದುಬೈಯಿಂದ ಊರಿಗೆ ಬಂದಿದ್ದ ಸನಂ (39) ಅವರು ಆಗಸ್ಟ್ 8ರಂದು ಸಂಬಂಧಿಕರ ಮನೆಗೆ ತೆರಳಿದ್ದರು. ಆಗಸ್ಟ್ 11ರಂದು ಬೆಳಗ್ಗೆ 11.30ರ ಸುಮಾರಿಗೆ ಮನೆಗೆ ವಾಪಸಾದಾಗ, ಮನೆಯ ಟೆರೇಸ್ ಬಾಗಿಲನ್ನು ಆಯುಧದಿಂದ ಬಲವಂತವಾಗಿ ತೆರೆಯಲಾಗಿರುವುದು ಕಂಡುಬಂದಿತ್ತು. ಮನೆಯ ಕೋಣೆಯಲ್ಲಿದ್ದ ಕಪಾಟಿನ ಡ್ರಾವರ್ನಲ್ಲಿದ್ದ 10,000 ಎಇಡಿ ದಿರ್ಹಾಮ್ ಹಾಗೂ ₹14,000 ನಗದು, ಒಟ್ಟು ಸುಮಾರು ₹2.14 ಲಕ್ಷ ಮೌಲ್ಯದ ಹಣ ಕಳವಾಗಿರುವುದು ಪತ್ತೆಯಾಗಿತ್ತು.

ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅಕ್ರ 108/2026ರಂತೆ ಬಿಎನ್ಎಸ್ನ ಕಲಂ 331(3), 331(4) ಮತ್ತು 305ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಮುಖ ಆರೋಪಿ ಅರುಣ್ ಆಚಾರಿ ಈ ಹಿಂದೆ ಮಣಿಪಾಲ ಪೊಲೀಸ್ ಠಾಣೆಯ ಅಕ್ರ 176/2016ರ ಪೋಕ್ಸೋ ಪ್ರಕರಣದಲ್ಲಿ ಒಂಬತ್ತು ವರ್ಷಗಳ ಕಾರಾಗೃಹ ಶಿಕ್ಷೆ ಅನುಭವಿಸಿದ್ದಾನೆ. 2025ರ ಜುಲೈನಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬಳಿಕ ಮತ್ತೆ ಕಳ್ಳತನ ಪ್ರಕರಣಗಳಲ್ಲಿ ತೊಡಗಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಐಪಿಎಸ್ ಅವರ ನಿರ್ದೇಶನದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯ್ಕ ಹಾಗೂ ಉಡುಪಿ ಉಪವಿಭಾಗದ ಡಿವೈಎಸ್ಪಿ ಬೆಳ್ಳಿಯಪ್ಪ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ಪಿಎಸ್ಐ ಪ್ರಕಾಶ್ ಹಾಗೂ ಸಿಬ್ಬಂದಿಗಳಾದ ಪ್ರಸನ್ನ ಸಿ., ಜೀವನ್ ಕುಮಾರ್, ಕೃಷ್ಣ ದೇವಾಡಿಗ, ಆನಂದ ಗಾಣಿಗ, ಆನಂದ ಎಸ್., ಓಬಳೇಶ್, ಮಣಿಪಾಲ ಠಾಣೆಯ ಮಲ್ಲಯ್ಯ ಹಿರೇಮಠ್ ಮತ್ತು ಹೇಮಂತ್ ಕುಮಾರ್ ಸೇರಿದಂತೆ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಅಭಿರಕ್ಷೆಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version