ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪ: ಪತಿ ಬಂಧನ

Spread the love

ಮಂಗಳೂರಿನಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪ: ಪತಿ ಬಂಧನ

ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮಾರ್ಕಬನಹಳ್ಳಿ ಗ್ರಾಮದ ಶಿವಪ್ಪ ಮಾದರ್ ಅವರ ಪುತ್ರ ಶಿವಲಿಂಗಪ್ಪ (40) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಲಿಂಗಪ್ಪ, ಅ.12ರಂದು ತನ್ನ ಪತ್ನಿ ಸೋನಾಲಿ ಎಂಬಾಕೆಯನ್ನು ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಆರೋಪಿಯನ್ನು ಅ.12ರಂದು ಕಾವೂರು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments