ಹಿಂದುತ್ವಕ್ಕಾಗಿ ಜೀವನದ ಕೊನೆಯ ದಿನದವರೆಗೂ ಕೆಲಸ ಮಾಡುತ್ತೇನೆ: ಅರುಣ್ ಕುಮಾರ್ ಪುತ್ತಿಲ

Spread the love

ಹಿಂದುತ್ವಕ್ಕಾಗಿ ಜೀವನದ ಕೊನೆಯ ದಿನದವರೆಗೂ ಕೆಲಸ ಮಾಡುತ್ತೇನೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಿ ‘ಹಿಂದೂ, ಹಿಂದೂ’ ಎನ್ನುವ ಕಾರಣಕ್ಕೆ ಬಿಜೆಪಿಗೆ ಸೋಲಾಯಿತು ಎಂಬ ಬಿಜೆಪಿ ಮುಖಂಡ ಆರ್. ಅಶೋಕ್ ಅವರ ಹೇಳಿಕೆಗೆ ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.

ಆರ್. ಅಶೋಕ್ ಅವರು ಯಾರನ್ನು ಉದ್ದೇಶಿಸಿ ಈ ಹೇಳಿಕೆ ನೀಡಿದ್ದಾರೆ ಎಂಬುದನ್ನು ಅವರನ್ನೇ ಕೇಳಬೇಕು. ಆದರೆ ತಾನು ಕಳೆದ 35 ವರ್ಷಗಳಿಂದ ಧರ್ಮದ ವಿಚಾರದಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ ಎಂದು ಅರುಣ್ ಕುಮಾರ್ ಪುತ್ತಿಲ ಸ್ಪಷ್ಟಪಡಿಸಿದ್ದಾರೆ.

ಧರ್ಮದ ವಿರುದ್ಧ ಕೆಲಸಗಳು ನಡೆದಾಗ, ಧಾರ್ಮಿಕ ಶ್ರದ್ಧಾಕೇಂದ್ರಗಳ ವಿರುದ್ಧ ಷಡ್ಯಂತ್ರಗಳು ನಡೆದಾಗ ಹಾಗೂ ಹಿಂದೂಗಳ ಪೂಜ್ಯ ಗೋಮಾತೆಯ ಹತ್ಯೆಯ ವಿಚಾರ ಬಂದಾಗ ತಾನು ಧ್ವನಿ ಎತ್ತಿ ಹೋರಾಟ ನಡೆಸಿದ್ದೇನೆ. ಅದೇ ರೀತಿ ಲವ್ ಜಿಹಾದ್ ಮೂಲಕ ಹಿಂದೂ ಹೆಣ್ಣುಮಕ್ಕಳನ್ನು ಮೋಸದ ಜಾಲದಲ್ಲಿ ಸಿಲುಕಿಸುವ ಪ್ರಯತ್ನಗಳ ವಿರುದ್ಧವೂ ಹೋರಾಟ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ತಮ್ಮ ಜೀವನದ ಕೊನೆಯ ದಿನದವರೆಗೂ ಹಿಂದುತ್ವಕ್ಕಾಗಿ ಕೆಲಸ ಮಾಡುತ್ತೇನೆ. ಬೇರೆ ಯಾವುದೇ ಅಪೇಕ್ಷೆ ಅಥವಾ ಸ್ವಾರ್ಥಕ್ಕಾಗಿ ಈ ಹಿಂದೆ ಕೆಲಸ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ.

ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳ ಕುರಿತು ಮಾತನಾಡಿದ ಅವರು, ಕಾರ್ಯಕರ್ತರ ಅಭಿಪ್ರಾಯದಂತೆ ಸಭೆ ನಡೆಸಿ ಚರ್ಚಿಸಲಾಗಿದೆ. ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಬೂತ್ ಮಟ್ಟದ ಆಕಾಂಕ್ಷಿಗಳಿಗೂ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.


Spread the love
Subscribe
Notify of

0 Comments