Spread the love
ಮಂಗಳೂರಿನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 23 ಗೋವುಗಳ ರಕ್ಷಣೆ
ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ತಡೆದು 23 ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.
ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಲಾರಿಯನ್ನು ತಡೆದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹಿಂಸಾತ್ಮಕ ರೀತಿಯಲ್ಲಿ 23 ಗೋವುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಪೊಲೀಸರನ್ನು ಕಂಡು ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Spread the love













