ಅಕ್ರಮ ಮರಳು ಸಾಗಾಟ ಪ್ರಕರಣ: ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಿನಂಗಡಿ ಪೊಲೀಸ್ ಠಾಣಾ ಪಿ.ಸಿ.ಆರ್. ಕ್ರಮಾಂಕ 01/18ರ ಅಕ್ರಮ ಮರಳು ಸಾಗಾಟ ಪ್ರಕರಣದಲ್ಲಿ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಆರೋಪಿಯಾಗಿದ್ದ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದೆ ಕಳೆದ ಸುಮಾರು ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆತನ ವಿರುದ್ಧ ವಾರಂಟ್ ಜಾರಿಯಾಗಿತ್ತು.
ಈ ಹಿನ್ನೆಲೆಯಲ್ಲಿ ಅ.6ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಯಾದ ಪಿ.ಸಿ. 2295 ಪ್ರವೀಣ್ ಹಾಗೂ ಪಿ.ಸಿ. ಲಿಂಗರಾಜು ಅವರು ಹಾಸನದಲ್ಲಿ ವಿಶ್ವನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.
ಬಳಿಕ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.













