Home Mangalorean News Kannada News ಅಂತರ್‌ ರಾಜ್ಯ ಮಾದಕವಸ್ತು ಜಾಲ ಬಯಲು: 53.58 ಗ್ರಾಂ MDMA ಸಹಿತ ಮೂವರ ಬಂಧನ

ಅಂತರ್‌ ರಾಜ್ಯ ಮಾದಕವಸ್ತು ಜಾಲ ಬಯಲು: 53.58 ಗ್ರಾಂ MDMA ಸಹಿತ ಮೂವರ ಬಂಧನ

Spread the love

ಅಂತರ್‌ ರಾಜ್ಯ ಮಾದಕವಸ್ತು ಜಾಲ ಬಯಲು: 53.58 ಗ್ರಾಂ MDMA ಸಹಿತ ಮೂವರ ಬಂಧನ

ಪುತ್ತೂರು: ಪುತ್ತೂರು ಕಡೆಯಿಂದ ಸುಳ್ಯ ಕಡೆಗೆ ಅಕ್ರಮವಾಗಿ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಅಂತರ್‌ರಾಜ್ಯ ಮಾದಕವಸ್ತು ಜಾಲದ ಮೂವರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು 1) ಮುಹಮ್ಮದ್ ಅಜ್ಮಲ್ ಸಿ @ ಅಜ್ಜು (30), ಕೋಝಿಕೋಡ್, ಕೇರಳ, 2) ಇಸ್ಮಾಯಿಲ್ (28), ವಯನಾಡ್ ಜಿಲ್ಲೆ, ಕೇರಳ ಹಾಗೂ 3) ಸಂಶೀರ್ (27), ಕೋಝಿಕೋಡ್, ಕೇರಳ ಎಂದು ಗುರುತಿಸಲಾಗಿದೆ.

ಪೊಲೀಸರು ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಆರೋಪಿಗಳು ವಾಹನದಲ್ಲಿ ಮಾರಕಾಯುಧವಾದ ತಲವಾರನ್ನು ಇಟ್ಟುಕೊಂಡಿದ್ದು, ಸುಮಾರು ರೂ.5,38,800 ಮೌಲ್ಯದ 53.58 ಗ್ರಾಂ ನಿಷೇಧಿತ MDMA ಮಾದಕವಸ್ತುವನ್ನು ಮಾರಾಟ ಉದ್ದೇಶದಿಂದ ವಶದಲ್ಲಿಟ್ಟುಕೊಂಡಿರುವುದು ಪತ್ತೆಯಾಯಿತು.

ಆರೋಪಿಗಳಿಂದ ಒಂದು ಕಾರು, ತಲವಾರು, ಮೊಬೈಲ್ ಫೋನ್‌ಗಳು ಹಾಗೂ ರೂ.10,000 ನಗದು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.25/2026ರಂತೆ ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 8C, 22(C), 29 ಹಾಗೂ ಶಸ್ತ್ರಾಸ್ತ್ರ ಕಾಯ್ದೆ ಕಲಂ 25(1B)(B)ರಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಕೇರಳ, ಗೋವಾ ಹಾಗೂ ಕರ್ನಾಟಕ ರಾಜ್ಯಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದುದಾಗಿ ತಿಳಿದುಬಂದಿದೆ. ಕೇರಳ ರಾಜ್ಯದ ಕೋಝಿಕೋಡ್, ಕಣ್ಣೂರು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಇವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡಿದ್ದರೆಂದು ತಿಳಿದುಬಂದಿದೆ.

ಇದಲ್ಲದೆ, ಮುಹಮ್ಮದ್ ಅಜ್ಮಲ್ ಸಿ @ ಅಜ್ಜು ಇತ್ತೀಚೆಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ.04/2026ರ ಎನ್‌ಡಿಪಿಎಸ್ ಕಾಯ್ದೆ ಪ್ರಕರಣದಲ್ಲೂ ಆರೋಪಿಯಾಗಿದ್ದಾನೆ. ಅಜ್ಮಲ್‌ನ ಸಹಚರ ಇಸ್ಮಾಯಿಲ್ ಮೇಲೂ ಕೇರಳ ರಾಜ್ಯದ ಕೋಝಿಕೋಡ್ ಜಿಲ್ಲೆಯಲ್ಲಿ ಮಾದಕವಸ್ತು ಸಾಗಾಟ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

ಪ್ರಕರಣ ಪತ್ತೆ ಕಾರ್ಯದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ಪ್ರಮೋದ್ ಕುಮಾರ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕ ಸುನಿಲ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾ ಡಿ.ಎಸ್.ಬಿ ವಿಭಾಗದ ಪೊಲೀಸ್ ನಿರೀಕ್ಷಕ ನಂದ ಕುಮಾರ್, ಉಪನಿರೀಕ್ಷಕರಾದ ಗುಣಪಾಲ ಹಾಗೂ ಸುಶ್ಮಾ ಜೆ. ಭಂಡಾರಿ ಸೇರಿದಂತೆ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್, ಪ್ರಶಾಂತ್ ರೈ, ಪ್ರಶಾಂತ್ ಎಂ., ಪ್ರವೀಣ್ ರೈ, ಹರ್ಷಿತ್ ಹಾಗೂ ಠಾಣಾ ಸಿಬ್ಬಂದಿಗಳಾದ ಪರಮೇಶ್ವರ ಗೌಡ, ಹರೀಶ್, ಸುಬ್ರಹ್ಮಣ್ಯ, ಭೀಮಸೇನ್, ಭವಿತ್ ರೈ, ನಾಗರಾಜ್, ಕಾರ್ತಿಕ್, ಜಿಲ್ಲಾ ಗಣಕಯಂತ್ರ ಸಿಬ್ಬಂದಿಗಳಾದ ದಿವಾಕರ್, ಸಂಪತ್ ಹಾಗೂ ಗೃಹ ರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version