ಜ. 31: ಮೀನು ಮಾರಾಟ ಫೆಡರೇಶನ್ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸನ್ಮಾನ ಕಾರ್ಯಕ್ರಮ : ಯಶ್ಪಾಲ್ ಸುವರ್ಣ
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ ವತಿಯಿಂದ ಪ್ರತಿ ವರ್ಷದಂತೆ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಜನವರಿ 31 ಶನಿವಾರ ಮಧ್ಯಾಹ್ನ 3 ಗಂಟೆಗೆ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಆಯೋಜಿಸಿರುವುದಾಗಿ ಫೆಡರೇಶನ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾದ ರಶ್ಮಿ ಎಸ್. ಆರ್. ನೆರವೇರಿಸಲಿದ್ದು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಅಶೋಕ್ ಕಾಮತ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಸಮಾರಂಭದಲ್ಲಿ 2025ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಮಲ್ಪೆ ಯಾಂತ್ರಿಕ (ಟ್ರಾಲ್) ದೋಣಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಮಚಂದ್ರ ಕುಂದರ್, ಮಲ್ಪೆ ಪರ್ಸೀನ್ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ನಾಗರಾಜ ಸುವರ್ಣ ಹಾಗೂ ಸ್ಕೂಲ್ ಗೇಮ್ಸ್ ಫೆಡರೇಷನ್ ಆಫ್ ಇಂಡಿಯಾ ರಾಷ್ಟ್ರೀಯ ಚೆಸ್ ಪಂದ್ಯಾಟದಲ್ಲಿ ಕಂಚಿನ ಪದಕ ವಿಜೇತ ಕ್ರೀಡಾ ಸಾಧಕಿ ರಿಮ ರಾವ್ ಯು. ಬಿ. ರವರಿಗೆ ಸನ್ಮಾನಿಸಿ ಗೌರವಿಸಲಾಗುವುದು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ನಾರಾಯಣ ಕರ್ಕೇರ, ಮಲ್ಪೆ ಏಳೂರು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಶ್ರೀ ರತ್ನಾಕರ ಸಾಲ್ಯಾನ್, ಮಲ್ಪೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಗೋಪಾಲ ಸಿ. ಬಂಗೇರ, ಮತ್ಸ್ಯೋದ್ಯಮಿಗಳಾದ ಶ್ರೀ ಆನಂದ ಪಿ. ಸುವರ್ಣ, ಶ್ರೀ ಸಾಧು ಸಾಲ್ಯಾನ್, ಅಳ ಸಮುದ್ರ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸುಭಾಷ್ ಮೆಂಡನ್, ಮಲ್ಪೆ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಂದರ್, ಕೋಟ ಪರ್ಸೀನ್ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಜೇಂದ್ರ ಸುವರ್ಣ, ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಬೇಬಿ ಎಚ್.ಸಾಲ್ಯಾನ್ , ಮಲ್ಪೆ ಮಹಿಳಾ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮತಿ ಗೀತಾ ಕರ್ಕೇರ, ನಗರಸಭೆಯ ಮಾಜಿ ಸದಸ್ಯರುಗಳಾದ ಶ್ರೀ ಸುಂದರ ಕಲ್ಮಾಡಿ, ಶ್ರೀ ವಿಜಯ ಕೊಡವೂರು, ಶ್ರೀ ಯೋಗೀಶ್ ಸಾಲ್ಯಾನ್, ಶ್ರೀಮತಿ ಲಕ್ಷ್ಮೀ ಮಂಜುನಾಥ, ಶ್ರೀಮತಿ ಎಡ್ಲಿನ್ ಕರ್ಕಡ ಭಾಗವಹಿಸಲಿದ್ದಾರೆ ಎಂದು ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.













