ಜೂ. 25| ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಸೂಚನೆಗಳು
ಮಂಗಳೂರು: ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಸಂಸ್ಥೆಯು ಅಡ್ಯಾರ್ ಗಾರ್ಡನ್ನಲ್ಲಿ ಆಯೋಜಿಸಿರುವ ಆನ್ ಈವಿನಿಂಗ್ ವಿದ್ ಶಾರುಖ್ ಖಾನ್ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸ ಲಿದ್ದು ಪೂರ್ವ ನೋಂದಣಿ ಮಾಡಿದವರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗುತ್ತದೆ ಸಾರ್ವಜನಿಕರಿಗೆ ಪ್ರವೇಶ ಅವಕಾಶ ಇರುವುದಿಲ್ಲ ಈ ಕುರಿತು ನಗರ ಪೊಲೀಸ್ ಆಯುಕ್ತಾಲಯ ಪ್ರಕಟಣೆ ಹೊರಡಿಸಿದೆ.

ಕಾರ್ಯಕ್ರಮವು ಆಹ್ವಾನಿತರಿಗೆ ಮಾತ್ರ ಸೀಮಿತವಾದ ಖಾಸಗಿ ಕಾರ್ಯಕ್ರಮವಾಗಿದ್ದು, ಕಾರ್ಯಕ್ರಮಕ್ಕೆ ಪ್ರವೇಶಿಸಲು ಕಟ್ಟುನಿಟ್ಟಿನ ನಿಯಮಾವಳಿಗಳನ್ನು ಜಾರಿಗೊಳಿಸಲಾಗಿದೆ. ಪ್ರವೇಶ ಪಾಸ್ ಹೊಂದಿರದ ಯಾವುದೇ ವ್ಯಕ್ತಿಗೆ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಆದ್ದರಿಂದ ದಯವಿಟ್ಟು ಈ ನಿಯಮವನ್ನು ಗೌರವಿಸಿ, ಪ್ರವೇಶ ದ್ವಾರದಲ್ಲಿ ಅನಗತ್ಯ ಮುಜುಗರ ಅಥವಾ ನಿರಾಶೆಯನ್ನು ತಪ್ಪಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳಲಾಗಿದೆ.
ಹೆಚ್ಚುವರಿಯಾಗಿ, ಹೆದ್ದಾರಿಯಲ್ಲಿ ಸಂಚಾರ ಸುಗಮವಾಗಿರುವುದನ್ನು ಖಚಿತಪಡಿಸಿಕೊಳ್ಳಲು ಸ್ಥಳೀಯ ಪೊಲೀಸರು ವಿಶೇಷ ಆದ್ಯತೆಯೊಂದಿಗೆ ವಾಹನ ಸಂಚಾರ ನಿರ್ವಹಣೆ ಮಾಡಲಿದ್ದಾರೆ. ಸಾರ್ವಜನಿಕರು ಕಾರ್ಯಕ್ರಮ ನಡೆಯುವ ಸ್ಥಳದ ಸುತ್ತಮುತ್ತ ಹಾಗೂ ಹೆದ್ದಾರಿ ಬದಿಯಲ್ಲಿ ಗುಂಪುಗೂಡುವುದನ್ನು ತಪ್ಪಿಸಬೇಕು. ಸಂಚಾರ ದಟ್ಟಣೆ ಉಂಟಾಗದಂತೆ ಭದ್ರತಾ ಸಿಬ್ಬಂದಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಲಿದ್ದಾರೆ. ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.
ಪ್ರವೇಶ ದ್ವಾರಗಳನ್ನು ಸಂಜೆ 4.30ಕ್ಕೆ ಮುಚ್ಚಲಾಗುತ್ತದೆ. ಪ್ರವೇಶ ಪಾಸ್ ಅನ್ನು ಕಡ್ಡಾಯವಾಗಿ ಪ್ರದರ್ಶಿ ಸಬೇಕು. ಪ್ರವೇಶ ಪಾಸ್ಗಳು ವೈಯಕ್ತಿಕ ಬಳಕೆಗೆ ಮಾತ್ರ ಮಾನ್ಯವಾಗಿದ್ದು, ಬೇರೆಯವರಿಗೆ ಹಸ್ತಾಂತರಿಸುವಂತಿಲ್ಲ ಎಂದು ಪ್ರಕಟಣೆ ತಿಳಿಸಿದೆ













