ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

Spread the love

ಕಡಬ | ಮಹಿಳೆಗೆ ಹಲ್ಲೆ, ಜೀವ ಬೆದರಿಕೆ: ಆರೋಪಿಯ ವಿರುದ್ಧ ಪ್ರಕರಣ ದಾಖಲು

ಕಡಬ: ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ತಿಳಿದುಬಂದಿದೆ.

ಪ್ರಕರಣದ ಫಿರ್ಯಾದುದಾರರಾದ ಮಹಿಳೆ ಕಳೆದ ಸುಮಾರು 3 ವರ್ಷಗಳಿಂದ ತನ್ನ ಗಂಡನಿಂದ ಪ್ರತ್ಯೇಕವಾಗಿ ಮಗಳೊಂದಿಗೆ ವಾಸವಾಗಿದ್ದರು. ಈ ನಡುವೆ ಆರೋಪಿತ ಪ್ರಭಾಕರ ಪಿ ಅವರೊಂದಿಗೆ ಪರಿಚಯವಾಗಿ ಆತ್ಮೀಯತೆ ಬೆಳೆದಿತ್ತು ಎನ್ನಲಾಗಿದೆ.

ದಿನಾಂಕ 03.04.2026 ರಂದು ಫಿರ್ಯಾದುದಾರರು ಆರೋಪಿಯೊಂದಿಗೆ ಮಾತನಾಡಲು ಅವರ ಮನೆಗೆ ತೆರಳಿದ ವೇಳೆ, ಆರೋಪಿಯು ಹಲ್ಲೆ ನಡೆಸಿ ಆವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026ರಡಿ ಕಲಂ 115(2), 352, 74, 351(2) BNS-2023 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments