ಕಾರ್ಕಳ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Spread the love

ಕಾರ್ಕಳ : ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ಕಾರ್ಕಳ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಹಿರ್ಗಾನ ಗ್ರಾಮದ ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ.

ಕೆಲಸಕ್ಕೆ ರಜೆ ಇದ್ದ ಹಿನ್ನೆಲೆಯಲ್ಲಿ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದೂರದ ದುರ್ಗಮ ದಾರಿಯಲ್ಲಿ ನಡೆದು ಸುವರ್ಣ ನದಿಗೆ ತೆರಳಿದ್ದರು. ಈ ವೇಳೆ ಭರತ್ ಹಾಗೂ ಹರ್ಷನ್ ಆಳವಾದ ನೀರಿನ ಪ್ರದೇಶಕ್ಕೆ ತೆರಳಿದ್ದು, ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ನಡೆದು ಸ್ಥಳಕ್ಕೆ ತೆರಳಿದರು. ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಇಬ್ಬರ ಮೃತದೇಹಗಳನ್ನು ಮೇಲಕ್ಕೆತ್ತಲಾಯಿತು. ಠಾಣಾಧಿಕಾರಿ ಸಂಜೀವ ದೇವಾಡಿಗ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಮೃತ ಭರತ್ ಪೇಂಟಿಂಗ್ ಕೆಲಸ ಮಾಡಿಕೊಂಡು ಕುಟುಂಬವನ್ನು ನಿರ್ವಹಿಸುತ್ತಿದ್ದರು. ಸ್ವಂತ ಮನೆ ನಿರ್ಮಿಸುವ ಕನಸು ಹೊಂದಿದ್ದ ಅವರ ಮನೆಯ ಕಾಮಗಾರಿ ಸ್ಲಾಬ್ ಹಂತ ತಲುಪಿತ್ತು. ಶೀಘ್ರದಲ್ಲೇ ಗೃಹಪ್ರವೇಶ ನಡೆಸುವ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಯುವಕನ ಅಕಾಲಿಕ ಸಾವು ಆಘಾತ ಉಂಟುಮಾಡಿದೆ.


Spread the love
Subscribe
Notify of

0 Comments