Home Mangalorean News Kannada News ಕಟಪಾಡಿ: ಮೈಲುಗಲ್ಲು, ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ

ಕಟಪಾಡಿ: ಮೈಲುಗಲ್ಲು, ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ

Spread the love

ಕಟಪಾಡಿ: ಮೈಲುಗಲ್ಲು, ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ

ಉಡುಪಿ: ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರು, ಅತೀ ವೇಗದಿಂದ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಬದಿಯ ಮೈಲುಗಲ್ಲಿಗೆ ಢಿಕ್ಕಿ ಹೊಡೆದು ಅಲ್ಲೇ ಸಮೀಪ ರಸ್ತೆ ಬದಿ ನಿಲ್ಲಿಸಿದ ಇಲೆಕ್ಟ್ರಿಕ್ ಸ್ಕೂಟರ್ ಗೂ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ರಭಸಕ್ಕೆ ರಸ್ತೆ ಬದಿ ಮೈಲಿಗಲ್ಲು ಕಿತ್ತು ಬಂದಿದ್ದು, ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ಗಂಗೊಳ್ಳಿಯ ಮುಹಮ್ಮದ್ ಝೈನ್ ಗಾಯಗೊಂಡಿರುವ ಬಗ್ಗೆ ತಿಳಿದುಬಂದಿದೆ.

ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


Spread the love

Exit mobile version