Home Mangalorean News Kannada News ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

Spread the love

ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

  • ಸಾಂಪ್ರದಾಯಿಕ ನೃತ್ಯ, ಕ್ರೀಡೆ, ಸಂಗೀತ, ಮನರಂಜನೆ ಹಾಗೂ ಕೇರಳದ ಆಹಾರ ವೈವಿಧ್ಯಕ್ಕೆ ಜನರ ಮೆಚ್ಚುಗೆ

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ಸಾಂಸ್ಕೃತಿಕ ವೈವಿಧ್ಯ, ಸಂಗೀತ, ನೃತ್ಯ, ಕ್ರೀಡೆ ಹಾಗೂ ಆಹಾರ ಪದ್ಧತಿಗಳ ಮೂಲಕ ಕರಾವಳಿಗರ ಮನಸೆಳೆಯಿತು.

ಮಲಯಾಳಂ ಚಿತ್ರರಂಗದ ನಟಿ ನೀನಾ ಕುರುಪ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಓಣಂ ಕೇರಳದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಕೇರಳದಾದ್ಯಂತ ಹತ್ತು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕೇರಳದ ಹೊರಭಾಗದಲ್ಲಿಯೂ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಓಣಂ ಸಂಭ್ರಮಾಚರಣೆ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕೇರಳ ಸಮಾಜಂ ಉಡುಪಿ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಸಂಘಟನೆ ಆರಂಭವಾಗಿ ಕೆಲವೇ ವರ್ಷಗಳಾಗಿದ್ದರೂ ಮೊದಲ ವರ್ಷದ ಓಣಂ ಆಚರಣೆಗೆ ಅಭೂತಪೂರ್ವ ಬೆಂಬಲ ದೊರಕಿತ್ತು. ಇದೀಗ ಎರಡನೇ ವರ್ಷದ ಕಾರ್ಯಕ್ರಮಕ್ಕೂ ನಿರೀಕ್ಷೆಗೂ ಮೀರಿ ಕೇರಳ ಸಮಾಜಂ ಸದಸ್ಯರು ಹಾಗೂ ಉಡುಪಿ ಜಿಲ್ಲೆಯ ಜನತೆ ಭಾಗವಹಿಸಿ ಯಶಸ್ವಿಗೊಳಿಸಿರುವುದು ಸಂಘಟನೆಗೆ ಮತ್ತಷ್ಟು ಬಲ ನೀಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಕೇರಳದ ಅತಿ ಕಿರಿಯ ವಯಸ್ಸಿನ ಬಾಲ ಗಾಯಕಿ ರಾನಿಯಾ ರಫೀಕ್ ಅವರ ಸುಮಧುರ ಗಾಯನ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಸಂಗೀತ ಪ್ರಿಯರ ಮನಗೆದ್ದಿತು.

ಕೇರಳದ ಸಾಂಪ್ರದಾಯಿಕ ನೃತ್ಯ ಪ್ರಕಾರಗಳಾದ ತಿರುವಾದಿರ ಮತ್ತು ಮೊಹಿಣಿಯಾಟ್ಟಂ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು. ಇದರೊಂದಿಗೆ ಯುವ ಪೀಳಿಗೆಯ ಫ್ಯಾಷನ್ ಶೋ ಕಾರ್ಯಕ್ರಮದ ಮೆರಗನ್ನು ಮತ್ತಷ್ಟು ಹೆಚ್ಚಿಸಿತು.

ಮಡಿಕೆ ಒಡೆಯುವ ಸ್ಪರ್ಧೆ, ಹಗ್ಗಜಗ್ಗಾಟ ಸೇರಿದಂತೆ ವಿವಿಧ ಹೊರಾಂಗಣ ಕ್ರೀಡೆಗಳಲ್ಲೂ ಸಮಾಜ ಬಾಂಧವರು ಹಾಗೂ ಯುವಜನರು ಉತ್ಸಾಹದಿಂದ ಪಾಲ್ಗೊಂಡು ಸಂಭ್ರಮಿಸಿದರು.

ಒಟ್ಟಾರೆ, ಕೇರಳದಿಂದ ಉಡುಪಿಗೆ ಬಂದು ನೆಲೆಸಿರುವ ಮಲಯಾಳಿ ಸಮುದಾಯದವರು ತಮ್ಮ ನಾಡಿನ ಕಲೆ, ಸಂಸ್ಕೃತಿ, ಸಂಪ್ರದಾಯ ಹಾಗೂ ಆಹಾರ ವೈವಿಧ್ಯವನ್ನು ಕರಾವಳಿಯ ಜನತೆಗೆ ಪರಿಚಯಿಸಿದ ಈ ಓಣಂ ಸಂಭ್ರಮಾಚರಣೆಯಲ್ಲಿ ಉಡುಪಿ ಜನತೆಯೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೇರಳದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಕಣ್ತುಂಬಿಕೊಂಡರು.

ಕಾರ್ಯಕ್ರಮದಲ್ಲಿ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದ ಟ್ರಸ್ಟಿ ಅಭಿಲಾಶ್ ಪಿವಿ ,ಬಾಲಕಲಾವಿದೆ ರಾನಿಯಾ ರಫೀಕ್, ಕೇರಳ ಸಮಾಜಂ ಕಾರ್ಯದರ್ಶಿ ಪ್ರಶಾಂತ್ ಕುಮಾರ್, ಬಿನ್ಸಿ ಎಂ. ಜೊರ್ಜ್ ಉಪಸ್ಥಿತರಿದ್ದರು.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version