ಪ್ರಧಾನಿ ಮೋದಿಯವರ ತಂದೆಯ ಕುರಿತು ಖರ್ಗೆ ಹೇಳಿಕೆ ಕಾಂಗ್ರೆಸ್ ಹೀನ ಮನಸ್ಥಿತಿಗೆ ಕೈಗನ್ನಡಿ : ಯಶಪಾಲ್ ಸುವರ್ಣ ಆಕ್ರೋಶ

Spread the love

ಪ್ರಧಾನಿ ಮೋದಿಯವರ ತಂದೆಯ ಕುರಿತು ಖರ್ಗೆ ಹೇಳಿಕೆ ಕಾಂಗ್ರೆಸ್ ಹೀನ ಮನಸ್ಥಿತಿಗೆ ಕೈಗನ್ನಡಿ : ಯಶಪಾಲ್ ಸುವರ್ಣ ಆಕ್ರೋಶ

ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ತಂದೆಯವರ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಕೀಳುಮಟ್ಟದ ಹೇಳಿಕೆ ನೀಡುವ ಕಾಂಗ್ರೆಸ್ ಪಕ್ಷದ ಹೀನ ಮನಸ್ಥಿತಿಗೆ ಕೈಗನ್ನಡಿ ಹಿಡಿದಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಅಗಲಿದ ವ್ಯಕ್ತಿಯ ಕುರಿತು ವೈಯಕ್ತಿಕ ಟೀಕೆ ಮಾಡುವುದು ಸರಿಯಲ್ಲ, ರಾಜಕೀಯ ಟೀಕೆಗಳು ವಿಚಾರಗಳಿಗೆ ಸೀಮಿತವಾಗಿರಬೇಕು. ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಹಿರಿಯ ರಾಜಕೀಯ ನಾಯಕರಾಗಿ ಗುರುತಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ ಯವರಿಗೆ ಇಂತಹ ಹೇಳಿಕೆಗಳು ಶೋಭೆ ತರುವುದಿಲ್ಲ.

ರಾಜಕೀಯದಲ್ಲಿ ವಿರೋಧಿಗಳಾಗಿರಬಹುದು, ಆದರೆ ವೈಯಕ್ತಿಕ ಗೌರವದ ಗಡಿ ದಾಟುವುದು ಘನತೆಗೆ ತಕ್ಕುದಲ್ಲ. ಪ್ರಧಾನಿ ಮೋದಿ ಅವರ ದಿವಂಗತ ತಂದೆಯ ಬಗ್ಗೆ ಹಗುರವಾಗಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು. ಕಾಂಗ್ರೆಸ್ ಪಕ್ಷಕ್ಕೆ ನೈತಿಕತೆ ಇದ್ದರೆ ಇಂತಹ ಹೇಳಿಕೆ ನೀಡುವ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಷ್ಟ್ರೀಯ ಅಧ್ಯಕ್ಷ ಹುದ್ದೆಯಿಂದ ತಕ್ಷಣ ವಜಾ ಮಾಡಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.


Spread the love
Subscribe
Notify of

0 Comments