Home Mangalorean News Kannada News ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

Spread the love

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ನೇಮಕ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಬುಧವಾರ ಆದೇಶ ಹೊರಡಿಸಿದೆ.

ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಆದೇಶ ಹೊರಡಿಸಿದ್ದು ಈ ಹಿಂದೆ ಕಿಶನ್ ಹೆಗ್ಡೆ ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಿಶನ್ ಹೆಗ್ಡೆ ಅವರನ್ನು ಜಿಲ್ಲಾ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದು ಬಳಿಕ ತಡೆಹಿಡಿಯಲಾಗಿತ್ತು. ಇತ್ತೀಚೆಗೆ ಎಐಸಿಸಿ ವೀಕ್ಷಕರನ್ನು ನೇಮಿಸಿ ಪ್ರತಿ ಜಿಲ್ಲೆಯಲ್ಲಿ ಸಂಘಟನ್ ಅಭಿಯಾನ್ ಕಾರ್ಯಕ್ರಮದ ಅಡಿಯಲ್ಲಿ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದು ವೀಕ್ಷಕರು ವರಿಷ್ಠರಿಗೆ ವರದಿ ಸಲ್ಲಿಸಿದ್ದರು.


Spread the love

Exit mobile version