ಕೊಡವೂರು: ಹಳೆ ವಿದ್ಯಾರ್ಥಿ ಸಂಘ, ಯುವಕ ಸಂಘ ವಾರ್ಷಿಕ ಕ್ರೀಡಾಕೂಟ
ಕೊಡವೂರು ಹಳೆ ವಿದ್ಯಾರ್ಥಿ ಸಂಘ ಹಾಗೂ ಯುವಕ ಸಂಘದ 61ವಾರ್ಷಿಕ ಕ್ರೀಡಾಕೂಟವು ಜ.4 ರಂದು ಸ್ಥಳೀಯ ಶಾಲಾ ಮೈದಾನದಲ್ಲಿ ಜರುಗಿತು.
ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಕ್ರೀಡೆ ನಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ ಕ್ರಿಯಾಶೀಲರನ್ನಾಗಿಸಿ ಶಿಸ್ತುಬದ್ಧ ಜೀವನ ನಮ್ಮಲ್ಲಿ ರೂಪುಗೊಳ್ಳುವಂತೆ ಮಾಡುತ್ತದೆ ಮತ್ತು ಸಮಾನತೆಯನ್ನು ಬಿಂಬಿಸುವ ಮೂಲಕ ಸಾಮಾಜಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಪೂರಕವಾಗಿರುತ್ತದೆ. ಹಾಗೆಯೇ ಕ್ರೀಡೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವಂತೆ ಮಾಡಿ ಆತ್ಮಸ್ಥೈರ್ಯವನ್ನು ಉದ್ದೀಪನಗೊಳಿಸಬಲ್ಲದು ಎಂದರು.
ದೈಹಿಕ ಶಿಕ್ಷಣ ಶಿಕ್ಷಕಿ ರತಿ.ಎಸ್, ಉಡುಪಿ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯೆ ಆಶಾ ಚಂದ್ರಶೇಖರ್,ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿ ಕೃಷ್ಣ ದೇವಾಡಿಗ, ಕೊಡವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಪ್ರಭಾತ್ ಕೋಟ್ಯಾನ್, ಸಾಮಾಜಿಕ ಮುಂದಾಳು ಶೇಖರ್ ಮಾಬ್ಯಾನ್, ದುರ್ಗಾ ಮಹಿಳಾ ಮಂಡಲದ ಕಾರ್ಯದರ್ಶಿ ಸುಶೀಲ ಜಯಕರ್ ಉಪಸ್ಥಿತರಿದ್ದರು. ನೂರೈವತ್ತಕ್ಕೂ ಅಧಿಕ ಮಹಿಳಾ ಕ್ರೀಡಾಳುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು.
ಯುವಕ ಸಂಘದ ಅಧ್ಯಕ್ಷ ದೀಕ್ಷಿತ್ ವಿ ದೇವಾಡಿಗ ಸ್ವಾಗತಿಸಿದರು ಕಾರ್ಯದರ್ಶಿ ಜಗದೀಶ್ ಶೆಟ್ಟಿ ವಂದಿಸಿದರು.ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ಕೊಡವೂರು ನಿರೂಪಿಸಿದರು.













