Spread the love
ಕೊಡವೂರು ಲಕ್ಷದೀಪೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ
ಮಹಾತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನಡೆಯುವ ಲಕ್ಷದೀಪೋತ್ಸವದ ಆಮಂತ್ರಣ ಪತ್ರಿಕೆಯನ್ನು ದೇವಳದ ತಂತ್ರಿಗಳಾದ ಪುತ್ತೂರು ಹಯವದನ ತಂತ್ರಿ ಹಾಗು ಪುತ್ತೂರು ವಾದಿರಾಜ ತಂತ್ರಿಯವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ ಕೊಡವೂರು, ಸದಸ್ಯರಾದ ಯಶೋಧರ್ ಸಾಲ್ಯಾನ್, ರಾಜ ಎ ಸೇರಿಗಾರ, ವಾದಿರಾಜ ಸಾಲ್ಯಾನ್, ಪವಿತ್ರಪಾಣಿ ಜನಾರ್ದನ್ ಕೊಡವೂರು, ದೇವಳದ ಉಮೇಶ್ ರಾವ್, ವಾಸುದೇವ ಉಪಾಧ್ಯ, ಪೂರ್ಣಿಮಾ ಜನಾರ್ದನ್ ಉಪಸ್ಥಿತರಿದ್ದರು.
Spread the love













