ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ

Spread the love

ಕೊಡವೂರು ಮಹಾ ರುದ್ರಯಾಗ: ಅದ್ದೂರಿ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ

ಉಡುಪಿ: ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ಮಹಾ ರುದ್ರಯಾಗದ ಪ್ರಯುಕ್ತ ಅದ್ದೂರಿ ಹಸಿರು ಹೊರೆಕಾಣಿಕೆ ಮೆರವಣಿಗೆ ಗುರುವಾರ ಜರುಗಿತು.

ಮಲ್ಪೆ ಅಯ್ಯಪ್ಪ ಮಂದಿರದಲ್ಲಿ ಬ್ರಹ್ಮರ್ಶಿ ಆನಂದ ಸಿದ್ದ ಪೀಠದ ಸಂಸ್ಥಾಪಕರಾದ ಶ್ರೀ ಮಹರ್ಷಿ ಆನಂದ ಗುರೂಜಿ ಪೂಜೆ ಸಲ್ಲಿಸುವುದರ ಮೂಲಕ ಹಸಿರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.

ಮಲ್ಪೆ ಅಯ್ಯಪ್ಪ ಮಂದಿರದಿಂದ ಆರಂಭವಾದ ಮೆರವಣಿಗೆ ಕೊಡವೂರು ಸರ್ಕಲ್ ಮೂಲಕ ಶಂಕರನಾರಾಯಣ ದೇವಸ್ಥಾನ ತಲುಪಿತು.

ಮಹಾ ರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್ ರಾಜ್ ಕಾಂಚನ್, ದೇವಳದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಉದ್ಯಮಿ ಹರಿಯಪ್ಪ ಕೋಟ್ಯಾನ್, ಈ ವೇಳೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ದಿನಕರ ಹೇರೂರು, ಮಾಜಿ ನಗರಸಭಾಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕರಾದ ತಾರನಾಥ ಪೂಜಾರಿ, ಕೆ ಕೃಷ್ಣಮೂರ್ತಿ ಆಚಾರ್ಯ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು, ರಮೇಶ್ ತಿಂಗಳಾಯ, ಪದಾಧಿಕಾರಿಗಳಾದ ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರಾ ಹಾಗೂ ಇತರರು ಉಪಸ್ಥಿತರಿದ್ದರು.

ಮೇ 15 ರಂದು ಮಹಾರುದ್ರ ಯಾಗ, ಗಣ ಯಾಗ ಧಾರ್ಮಿಕ ವಿಧಿವಿಧಾನಗಳು ಆರಂಭಗೊಳ್ಳಲಿದೆ. ಅಂದು ಸಂಜೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.

16ರಂದು ಉಚಿತ ಆರೋಗ್ಯ ಶಿಬಿರ ನಡೆಯಲಿದೆ. 17ರಂದು ಮಲ್ಪೆ ಬೀಚ್ನಲ್ಲಿ ವಿವಿಧ ಸಾಂಪ್ರದಾಯಿಕ ಕ್ರೀಡಾಕೂಟಗಳು ನಡೆಯಲಿದ್ದು, ಅಂದು ಸಂಜೆ 6ಗಂಟೆಗೆ ಮಲ್ಪೆ ಕಡಲ ತೀರದಲ್ಲಿ ವಾರಣಾಸಿಯ ಪುರೋಹಿತರಿಂದ ಗಂಗಾರತಿ ನೆರವೇರಲಿದೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಲಿದ್ದಾರೆ. ಅಂದು ರಾತ್ರಿ 8ಕ್ಕೆ ದಕ್ಷಿಣ ಗಾಯಕಿ ಮಂಗ್ಲಿ ಅವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. 18ರಂದು ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.


Spread the love
Subscribe
Notify of

0 Comments
Inline Feedbacks
View all comments