ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ದೇವರ ದರ್ಶನ

Spread the love

ಕೊಡವೂರು ಮಹಾರುದ್ರಯಾಗ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ, ದೇವರ ದರ್ಶನ

ಉಡುಪಿ: ಕೊಡವೂರು ಮಹತೋಭಾರ ಶ್ರೀಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಆಯೋಜಿಸಿರುವ ಮಹಾರುದ್ರಯಾಗ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶನಿವಾರ ಆಗಮಿಸಿ ದೇವರ ದರ್ಶನ ಪಡೆದರು.

ಹರಿ-ಹರರ ಈ ಪವಿತ್ರ ಕ್ಷೇತ್ರದಲ್ಲಿ ನಾಡಿನ ಸಮಸ್ತ ಜನರ ಕಲ್ಯಾಣಕ್ಕಾಗಿ, ಎಲ್ಲರ ಬಾಳಿನಲ್ಲಿ ಸುಖ-ಶಾಂತಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದರು..

ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರಸಾದ್ ರಾಜ್ ಕಾಂಚನ್ ಹಾಗೂ ಸಮಿತಿ ಪದಾಧಿಕಾರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಸಚಿವರು ಶ್ರೀಶಂಕರನಾರಾಯಣ ದೇವರ ದರ್ಶನ ಪಡೆದರು. ಸಚಿವರಿಗೆ ಶಾಲು ಹೊದಿಸಿ ದೇವರ ವಿಗ್ರಹವನ್ನು ಕೊಟ್ಟು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿಕೆ, ಜಿಪಂ ಸಿಇಒ ಪ್ರತೀಕ್ ಬಾಯಲ್, ಕೊಡವೂರು ಶಂಕರನಾರಾಯಣ ದೇವಸ್ಥಾನದ ಅಧ್ಯಕ್ಷರಾದ ಪ್ರಕಾಶ್ ಜಿ ಕೊಡವೂರು, ಮಹಾರುದ್ರ ಯಾಗ ಸಮಿತಿಯ ಪ್ರಧಾನ ಸಂಚಾಲಕರಾದ ತಾರನಾಥ ಪೂಜಾರಿ, ಸಂಚಾಲಕರಾದ ನಂದಕಿಶೋರ್ ಕೆಮ್ಮಣ್ಣು ರಮೇಶ್ ತಿಂಗಳಾಯ ಮೊದಲಾದ ಗಣ್ಯರು ಉಪಸ್ಥಿತರಿದ್ದರು.


Spread the love