Spread the love
ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲು ಸೇರಿ 6 ಮಂದಿಯ ವಿರುದ್ಧ ಗೂಂಡಾ ಕಾಯ್ದೆ
ಮಂಗಳೂರು: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ.
ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಮತ್ತು ರಂಜಿತ್ (35) ಎಂಬವರ ವಿರುದ್ಧ ಕಾನೂನು ಬದ್ಧವಾಗಿ ಗೂಂಡಾ ಕಾಯ್ದೆ ಅಳವಡಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
Spread the love













