ಕೊಣಾಜೆ | ಪಿಕಪ್‌ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು; ಸಹಸವಾರನಿಗೆ ಗಂಭೀರ ಗಾಯ

Spread the love

ಕೊಣಾಜೆ | ಪಿಕಪ್‌ ಢಿಕ್ಕಿ: ದ್ವಿಚಕ್ರ ವಾಹನ ಸವಾರ ಮೃತ್ಯು; ಸಹಸವಾರನಿಗೆ ಗಂಭೀರ ಗಾಯ

ಕೊಣಾಜೆ: ದ್ವಿಚಕ್ರ ವಾಹನಕ್ಕೆ ಪಿಕಪ್‌ ವಾಹನವೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ದಿಚಕ್ರ ವಾಹನ ಸವಾರ ಮೃತಪಟ್ಟಿದ್ದು, ಸಹಸವಾರ ಗಾಯಗೊಂಡಿರುವ ಘಟನೆ ಇಂದು ಸಂಜೆಯ ವೇಳೆ ಬೋಳಿಯಾರ್ ಸಮೀಪದ ಕುರ್ನಾಡು ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಮೃತಪಟ್ಟ ಯುವಕನನ್ನು ಕಿನ್ಯ ಅರೆಬಿನಗರದ ಮಹಮ್ಮದ್ ಅರ್ಫಾಝ್ ( 22) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಸಹಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ದ್ವಿಚಕ್ರ ವಾಹನದ ಹಿಂದಿನಿಂದ ಬಂದ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ದ್ವಿಚಕ್ರ ವಾಹನ ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ನಂತರ ಪಿಕಪ್‌ ಕೂಡ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್‌ ಕಂಬ ಮುರಿದುಬಿದ್ದಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


Spread the love
Subscribe
Notify of

0 Comments